ಮೈಸೂರು: ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ - ಟಿಪ್ಪು ಸುಲ್ತಾನ್
ಮೈಸೂರು: ಟಿಪ್ಪು ಸುಲ್ತಾನ್‌ನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿ ವಿವಾದ ಹುಟ್ಟು ಹಾಕಿದ್ದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಜಿಲ್ಲಾ ಕಾಂಗ್ರೆಸ್ ಹಾಗೂ ಕೆಪಿಸಿಸಿ ಮಹಿಳಾ ಘಟಕ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದರು. ಇದಕ್ಕೂ ಮುನ್ನ, ನಗರದ ಕಾಂಗ್ರೆಸ್ ಕಚೇರಿಯಿಂದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ಮೂಲಕ ಕಾಲ್ನಡಿಗೆಯಲ್ಲಿ ದೇವರಾಜ ಪೊಲೀಸ್ ಠಾಣೆಗೆ ಆಗಮಿಸಿದರು. ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮೆರವಣಿಗೆಯಲ್ಲಿ 'ನನ್ನನ್ನೂ ಹತ್ಯೆ ಮಾಡಿ' ಎಂದು ಬರೆದ ಪೋಸ್ಟರ್ ಪ್ರದರ್ಶಿಸಿದರು.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್‌ನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾದ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ಧಶೆಟ್ಟಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಇದನ್ನೂಓದಿ:₹402 ಕೋಟಿ ಹೆಚ್ಚುವರಿ ಬಜೆಟ್ ಮಂಡಿಸಿದ್ದೇವೆ, ಇದು ಆರ್ಥಿಕಾಭಿವೃದ್ಧಿ ತೋರಿಸುತ್ತದೆ: ಸಿಎಂ