ಗೂಳಿ ಓಟಕ್ಕೆ ಅನುಮತಿ ನಿರಾಕರಿಸಿದ್ದಕ್ಕೆ ಆಕ್ರೋಶ: ಹೊಸೂರು-ಬೆಂಗಳೂರು ಹೆದ್ದಾರಿ ತಡೆ, ಬಸ್ಗಳಿಗೆ ಕಲ್ಲು - ಈಟಿವಿ ಭಾರತ ಕನ್ನಡ
ಕೃಷ್ಣಗಿರಿ(ತಮಿಳುನಾಡು):ಗೂಳಿ ಓಟದ ಸ್ಪರ್ಧೆಗೆ ಅನುಮತಿ ನೀಡಿಲ್ಲ ಎಂದು ರಸ್ತೆ ತಡೆದ ಜನರು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿಂದು ನಡೆದಿದೆ. ಹೊಸೂರು ಪಕ್ಕದ ಗೋಪಚಂದ್ರ ಎಂಬಲ್ಲಿ ಗೂಳಿ ಓಟದ ಸ್ಪರ್ಧೆಗೆ ಸಿದ್ಧತೆ ನಡೆಸಲಾಗಿತ್ತು. ಅದರಂತೆ, ಇಂದು ಬೆಳಗ್ಗೆ ಗೂಳಿಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಲೆಂದು ಸಾವಿರಾರು ಯುವಕರು ಬಂದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ತಡೆದು ಸ್ಪರ್ಧೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿಲ್ಲ ಎಂದು ತಿಳಿಸಿದ್ದಾರೆ.
ಇದರಿಂದ ಕೋಪಗೊಂಡ ಯುವಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಯುವಕರನ್ನು ಚದುರಿಸಲು ಪೊಲೀಸರು ಮುಂದಾದಾಗ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ಇಲಾಖೆಯ ವಾಹನ ಸೇರಿದಂತೆ ಸರ್ಕಾರಿ, ಖಾಸಗಿ ಬಸ್ಗಳ ಮೇಲೂ ಕಲ್ಲು ತೂರಿದ್ದಾರೆ. ಬಳಿಕ ಜಿಲ್ಲಾಡಳಿತ ಓಟದ ಸ್ಪರ್ಧೆಗೆ ಅನುಮತಿ ನೀಡಿದೆ. ಸುಮಾರು ಮೂರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಇದನ್ನೂ ಓದಿ:ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಗರ್ಭಿಣಿ ಸೇರಿ ಇಬ್ಬರು ಸಾವು