ತಿರುನಲ್ವೇಲಿ-ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸಿದ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ - ತಮಿಳಿಸೈ ಸೌಂದರರಾಜನ್
Published : Sep 24, 2023, 7:53 PM IST
ತಿರುನೆಲ್ವೇಲಿ (ತಮಿಳುನಾಡು) : ಪ್ರಧಾನಿ ನರೇಂದ್ರ ಮೋದಿ ಅವರು ತಿರುನಲ್ವೇಲಿ-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ ಬೆನ್ನಲ್ಲೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಭಾನುವಾರ ಈಟಿವಿ ಭಾರತ್ ಜೊತೆ ಮಾತನಾಡುತ್ತಾ, ಜನರು ರೈಲು ಪ್ರಯಾಣವನ್ನು ಆನಂದಿಸುತ್ತಿದ್ದಾರೆ ಮತ್ತು ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದಾರೆ ಎಂದಿದ್ದಾರೆ. ನಾನು ಕೂಡ ತಮಿಳುನಾಡಿನಿಂದ ಬಂದಿದ್ದೇನೆ ಮತ್ತು ರಾಜ್ಯದಲ್ಲಿಯೇ ಹುಟ್ಟಿ ಬೆಳೆದಿದ್ದೇನೆ. ಹಾಗಾಗಿ, ನಾನು ರೈಲು ಪ್ರಯಾಣವನ್ನು ಆನಂದಿಸುತ್ತಿದ್ದೇನೆ ಮತ್ತು ಇದು ಗಮನಾರ್ಹ ಬೆಳವಣಿಗೆಯಾಗಿದೆ ಎಂದಿದ್ದಾರೆ.
"ಈ ಹಿಂದೆ ದಕ್ಷಿಣದ ರಾಜ್ಯಗಳು ಎಂದು ಭಾವಿಸಿ ನಿರ್ಲಕ್ಷಿಸಲಾಗಿತ್ತು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮತ್ತು ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅದು ಬದಲಾಗಿದೆ" ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ.
ಉತ್ತರ-ದಕ್ಷಿಣ ಸಂಪರ್ಕದ ಕುರಿತು ಲೆಫ್ಟಿನೆಂಟ್ ಗವರ್ನರ್ ಮಾತನಾಡುತ್ತಾ, "ನಾನೂ ತಮಿಳುನಾಡಿನವಳಾಗಿದ್ದರಿಂದ ಬಿಜೆಪಿ ಸರ್ಕಾರವು ದಕ್ಷಿಣ ರಾಜ್ಯಗಳ ಅಭಿವೃದ್ಧಿಗೆ ಶ್ರಮಿಸಿದೆ ಎಂದು ನಾನು ಭಾವಿಸುತ್ತೇನೆ. ವಂದೇ ಭಾರತ್ ಎಕ್ಸ್ಪ್ರೆಸ್ನಿಂದ ತಮಿಳುನಾಡಿನ ಜನರಿಗೆ ಹಾಗೂ ರಾಮೇಶ್ವರಂಗೆ ಭೇಟಿ ನೀಡಲು ಇಲ್ಲಿಗೆ ಆಗಮಿಸುವ ಯಾತ್ರಾರ್ಥಿಗಳಿಗೆ ಅನುಕೂಲವಾಗಿದೆ. ಅದರ ಹೊರತಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನೆಯೊಂದಿಗೆ ವ್ಯಾಪಾರ, ತಂತ್ರಜ್ಞಾನ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಇದನ್ನೂ ಓದಿ:9 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ; ತ್ವರಿತ ಪ್ರಯಾಣವೇ ನಮ್ಮ ಗುರಿ ಎಂದ ಪ್ರಧಾನಿ ಮೋದಿ
TAGGED:
etv bharath kannada news