ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟಕ್ಕೆ ರಾಘವೇಶ್ವರ ಶ್ರೀ ಬೆಂಬಲ - ಈಟಿವಿ ಭಾರತ್ ಕನ್ನಡ
ಕಾರವಾರದಲ್ಲಿ ನಡೆಯುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ. "ಬಹಳ ದೊಡ್ಡ ಇತಿಹಾಸ, ಪರಂಪರೆ ಇರುವ ಜಿಲ್ಲೆ ನಮ್ಮದು. ಅಂತಹ ಜಿಲ್ಲೆಯಲ್ಲಿ ಉತ್ತಮ ಆಸ್ಪತ್ರೆ ಇಲ್ಲದ ಕಾರಣ ರೋಗಿಗಳನ್ನು ಹೊರ ಜಿಲ್ಲೆಗಳಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಪ್ರಾಣ ಕಳೆದುಕೊಳ್ಳುವಂತಹ ಸಾಧ್ಯತೆಗಳಿರುತ್ತವೆ. ಹಾಗಾಗಿ ಸರ್ಕಾರ ಕೂಡಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ.
Last Updated : Feb 3, 2023, 8:25 PM IST