ಕರ್ನಾಟಕ

karnataka

ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ

ETV Bharat / videos

ಮಂಗಳೂರಿನ ಪಬ್ಬಾಸ್​ನಲ್ಲಿ ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ - ವಿಡಿಯೋ - ರಾಹುಲ್ ಗಾಂಧಿ

By

Published : Apr 28, 2023, 10:48 AM IST

ಮಂಗಳೂರು(ದಕ್ಷಿಣ ಕನ್ನಡ):ಕರಾವಳಿ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಂಗಳೂರು ಪಬ್ಬಾಸ್ ಐಸ್ ಕ್ರೀಂ ಪಾರ್ಲರ್​ನಲ್ಲಿ ಐಸ್ ಕ್ರೀಂ ಸವಿದರು. ಉಡುಪಿಯಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ನಗರದ ಹೊರವಲಯದ ಅಡ್ಯಾರ್​​ನಲ್ಲಿ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಕಾಂಗ್ರೆಸ್​‌ನ 5 ನೇ ಗ್ಯಾರಂಟಿ ಘೋಷಿಸಿದ್ದರು. ಆ ಬಳಿಕ ಮಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ ರಾಹುಲ್, ರಾತ್ರಿ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್​​ಗೆ ಭೇಟಿ ನೀಡಿದ್ದರು.

ನಂತರ ಮಂಗಳೂರಿನ ಲಾಲ್ ಬಾಗ್​ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್​ಗೆ ಕಾಂಗ್ರೆಸ್ ಮುಖಂಡರೊಂದಿಗೆ ಆಗಮಿಸಿ ರಾಹುಲ್ ಗಾಂಧಿ ಐಸ್ ಕ್ರೀಂ ಸವಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಮುಖಂಡರಾದ ಕೆ ಸಿ ವೇಣುಗೋಪಾಲ್, ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್​ ಗಾಂಧಿ ಜೊತೆ ಐಸ್​ ಕ್ರೀಂ ಸವಿದರು.

ಸೆಲ್ಫಿಗೆ ಮುಗಿಬಿದ್ದ ಜನ: ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್​ಗೆ ಆಗಮಿಸಿದ್ದ ರಾಹುಲ್ ಗಾಂಧಿಯೊಂದಿಗೆ ಐಸ್ ಕ್ರೀಂ ಪಾರ್ಲರ್​ನಲ್ಲಿದ್ದ ಗ್ರಾಹಕರು ಸೆಲ್ಫಿಗೆ ಮುಗಿಬಿದ್ದರು. ಜನರ ಸೆಲ್ಫಿಗೆ ರಾಹುಲ್ ಗಾಂಧಿ ಸಹಕರಿಸಿದರು. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಇದ್ದ ರಾಹುಲ್ ಗಾಂಧಿ ಇಂದು ಬೆಳಗ್ಗೆ ತೆರಳಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್​ನಿಂದ 5ನೇ ಗ್ಯಾರಂಟಿ ಘೋಷಣೆ : ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ

ABOUT THE AUTHOR

...view details