ಮಾಜಿ ಕ್ರಿಕೆಟಿಗ ಅಜರುದ್ದೀನ್ ಜತೆ ಆಟೋ ಚಾಲಕರು, ಪುರಸಭೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಮಾತುಕತೆ
Published : Nov 28, 2023, 10:39 PM IST
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರ ಕೊನೆಯ ದಿನವಾದ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿನ ಆಟೋ ವರ್ಕರ್ಸ್ ಯೂನಿಯನ್, ಜಿಹೆಚ್‌ಎಂಸಿ ಮತ್ತು ಗಿಗ್ ವರ್ಕರ್ಸ್ ಯೂನಿಯನ್‌ಗಳೊಂದಿಗೆ ಸಭೆ ನಡೆಸಿದರು.
ಪದೇ ಪದೆ ಅಪಘಾತಗಳು ಸಂಭವಿಸುತ್ತಿವೆ ಎಂದು ಸಫಾಯಿ ಕಾರ್ಮಿಕರು ರಾಹುಲ್ ಮುಂದೆ ತಮ್ಮ ಅಳಲು ತೋಡಿಕೊಂಡರು. ಅಲ್ಲದೇ ಅಪಘಾತ ವಿಮೆಗೆ ಮನವಿ ಮಾಡಿದರು. ಇದೇ ವೇಳೆ, ಜಿಎಚ್‌ಎಂಸಿ ಗುತ್ತಿಗೆ ನೌಕರರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದರು. ಮತ್ತೊಂದೆಡೆ ಪೊಲೀಸರು ದಂಡ ವಿಧಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದ ಕ್ಯಾಬ್ ಮತ್ತು ಆಟೋ ಚಾಲಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನೆಲ್ಲ ಕೇಳಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಸಿಎಂ ಹಾಗೂ ಸಚಿವರು ಸಭೆ ನಡೆಸಿ ಈ ಸಮಸ್ಯೆಗಳನ್ನು ಬಗೆ ಹರಿಸುವುದಾಗಿ ಭರವಸೆ ನೀಡಿದರು.
ಈ ಸಭೆ ನಂತರ ಮಾಜಿ ಭಾರತೀಯ ಕ್ರಿಕೆಟ್ ನಾಯಕ ಅಜರುದ್ದೀನ್ ಅವರೊಂದಿಗೆ ಫಂಕ್ಷನ್ ಹಾಲ್‌ನಿಂದ ಯೂಸುಫ್‌ಗುಡಾ ಮೆಟ್ರೋ ನಿಲ್ದಾಣದವರೆಗೆ ಆಟೋದಲ್ಲಿ ಪ್ರಯಾಣಿಸಿದರು. ಜುಬಿಲಿಹಿಲ್ಸ್ ಕ್ಷೇತ್ರದಿಂದ ಅಜರುದ್ದೀನ್ ಸ್ಪರ್ಧಿಸುತ್ತಿದ್ದಾರೆ.
ಇದನ್ನೂ ಓದಿ:ತೆಲಂಗಾಣ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ರಾಜ್ಯಾದ್ಯಂತ 144 ಸೆಕ್ಷನ್ ಜಾರಿ