Rain Effect: ರಾಯಚೂರಿನ ಶೀಲಹಳ್ಳಿ ಸೇತುವೆ ಮುಳುಗಡೆ-ವಿಡಿಯೋ
ರಾಯಚೂರು:ನಾರಾಯಣಪುರ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಈ ಹಿನ್ನೆಲೆ ಕೃಷ್ಣಾ ನದಿಗೆ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದ್ದು, ಇದರಿಂದ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಇಂದು ಮುಳುಗಡೆಯಾಗಿದೆ.
ಪ್ರಸುತ್ತ ಜಲಾಶಯಕ್ಕೆ ಒಂದು ಲಕ್ಷ 66 ಸಾವಿರದ 900 ಕ್ಯೂಸೆಕ್ ನೀರನ್ನು ನದಿಗೆ ಹರಿದು ಬಿಡಲಾಗಿದೆ. ಇದರ ಪರಿಣಾಮ ನಡುಗಡ್ಡೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳಗಡೆಯಾಗಿದೆ. ಹಾಗಾಗಿ ನಡುಗಡ್ಡೆ ನಿವಾಸಿಗಳು ಪರ್ಯಾಯ ಮಾರ್ಗವಾಗಿ ಸಂಚರಿಸುವುದರ ಜತೆಗೆ ಪ್ರವಾಹ ಭೀತಿ ಎದುರಾಗಿದೆ. ಜಲಾಶಯದಲ್ಲಿ 11 ಗಂಟೆಗೆ 1 ಲಕ್ಷ 67 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. ಹೆಚ್ಚುವರಿ ನೀರನ್ನು 30 ಕ್ರಾಸ್ಟ್ ಗೇಟ್ ಮೂಲಕ ಹರಿಸಲಾಗುತ್ತಿದೆ.
ಲಕ್ಷಾಂತರ ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಟ್ಟಿರುವ ಪರಿಣಾಮ ಕೃಷ್ಣಾ ತೀರದಲ್ಲಿ ಬರುವ ರಾಯಚೂರು ಜಿಲ್ಲೆಯ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲಾಡಳಿತ ನದಿ ತೀರಕ್ಕೆ ಜನರು ತೆರಳದಂತೆ ಗ್ರಾಮಗಳಲ್ಲಿ ಡಂಗುರ ಸಾರುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಇದನ್ನೂ ಓದಿ:ಚಿಕ್ಕೋಡಿಯಲ್ಲಿ ಹಲವು ದೇವಸ್ಥಾನಗಳು ಜಲಾವೃತ: ಎದೆಮಟ್ಟದ ನೀರಲ್ಲೇ ದೇವರ ದರ್ಶನ ಪಡೆದ ಭಕ್ತರು