ಕರ್ನಾಟಕ

karnataka

ಮಂಗಳೂರು: ಸಂಚರಿಸುತ್ತಿದ್ದ ರೈಲಿಗೆ ಹತ್ತಲು ಹೋದ ವೃದ್ಧನನ್ನು ರಕ್ಷಿಸಿದ ರೈಲ್ವೇ ಸಿಬ್ಬಂದಿ

ETV Bharat / videos

ಮಂಗಳೂರು: ಸಂಚರಿಸುತ್ತಿದ್ದ ರೈಲಿಗೆ ಹತ್ತಲು ಹೋದ ವೃದ್ಧನನ್ನು ರಕ್ಷಿಸಿದ ರೈಲ್ವೇ ಸಿಬ್ಬಂದಿ - ಆರ್‌ಪಿಎಫ್ ಸಿಬ್ಬಂದಿ ಪ್ರಕಾಶ್

By

Published : Jul 29, 2023, 1:37 PM IST

ಮಂಗಳೂರು: ಸಂಚರಿಸುತ್ತಿದ್ದ ರೈಲು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ಹಿರಿಯ ನಾಗರಿಕರೊಬ್ಬರನ್ನು ರೈಲ್ವೇ ಭದ್ರತಾ ಸಿಬ್ಬಂದಿ ರಕ್ಷಿಸಿರುವ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಕಳೆದ ಗುರುವಾರ ನಡೆದಿದೆ. ಕಣ್ಣೂರಿನ ವಯಲ್‌ವೀಡು ಮೂಲದ ಶಂಕರ್ ಬಾಬು(70) ಅದೃಷ್ಟವಶಾತ್​ ಸಾವಿನ ದವಡೆಯಿಂದ ಪಾರಾದವರು.

ಗುರುವಾರ ಸಂಜೆ 6.15ರ ಸುಮಾರಿಗೆ ಶಂಕರಬಾಬು ಅವರು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಮಲಬಾರ್ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿದ್ದಾಗಲೇ ಹತ್ತಲು ಯತ್ನಿಸಿದ್ದಾರೆ. ಈ ವೇಳೆ ರೈಲು ವೇಗ ಪಡೆದ ಕಾರಣ ಅವರು ರೈಲಿನ ಎಸ್-6 ಕೋಚ್‌ಗೆ ಹತ್ತಲು ಸಾಧ್ಯವಾಗದೆ ಹ್ಯಾಂಡಲ್‌ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಪ್ರಕಾಶ್ ತಕ್ಷಣ ಧಾವಿಸಿ ಬಂದು ಶಂಕರ್ ಬಾಬು ಅವರನ್ನು ರಕ್ಷಣೆ ಮಾಡಿದ್ದಾರೆ.

ಶಂಕರಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪಮಟ್ಟಿಗೆ ಗಾಯವಾಗಿದೆ. ಆರ್‌ಪಿಎಫ್ ಸಿಬ್ಬಂದಿ ಪ್ರಕಾಶ್ ಅವರ ಸಮಯಪ್ರಜ್ಞೆಯಿಂದ ವೃದ್ಧ ಅಪಾಯದಿಂದ ಪಾರಾಗಿದ್ದಾರೆ. ಇಂತಹ ಘಟನೆಗಳು ಮರಕಳಿಸುತ್ತಿದ್ದು, ಪ್ರಯಾಣಿಕರು ಎಚ್ಚರಿಕೆ ವಹಿಸಬೇಕು ಎಂದು ರೈಲ್ವೇ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ :ಸೌಂದರ್ಯದ ರಾಶಿ ಚಿಕ್ಕಮಗಳೂರು ಚಾರ್ಮಾಡಿ ಘಾಟಿ.. ಕಾಫಿನಾಡಿನ ಕ್ಷೀರಧಾರೆಯ ವಿಡಿಯೋ ನೋಡಿ..

ABOUT THE AUTHOR

...view details