ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಹಾನಿ.. ಗ್ರಾಮಗಳಿಗೆ ಸಚಿವ ಶ್ರೀರಾಮುಲು ಭೇಟಿ - ಗ್ರಾಮಗಳಿಗೆ ಸಚಿವ ಶ್ರೀರಾಮುಲು ಭೇಟಿ
ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಚಿವ ಬಿ. ಶ್ರೀರಾಮುಲು ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳ್ಳಾರಿ ತಾಲೂಕಿನ ಹೊಸ ಮೋಕಾ, ಗೋಟೂರು ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವರು ಸಂತ್ರಸ್ತರಿಗೆ ಸಮಸ್ಯೆ ಕುರಿತು ಕೇಳಿದರು. ಬಳಿಕ ಗೋಟೂರು ಗ್ರಾಮದಲ್ಲಿ ಬಿದ್ದಿರುವ ಮನೆಗಳಿಗೆ ತೆರಳಿದ ಸಚಿವರು, ಹಾನಿಗೀಡಾದ ಮನೆಗಳಿಗೆ ತಕ್ಷಣ ಪರಿಹಾರ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Last Updated : Feb 3, 2023, 8:25 PM IST