ವರುಣನ ಅಬ್ಬರಕ್ಕೆ ವಾಣಿಜ್ಯನಗರಿ ತತ್ತರ.. ಧರೆಗುರುಳಿದ ಬೃಹತ್ ಗಾತ್ರದ ಮರ-video - ಮಳೆ
ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಸಂಚಾರ ವ್ಯತ್ಯಯವಾಗಿದೆ. ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ವರುಣನ ಅಬ್ಬರಕ್ಕೆ ಮರವೊಂದು ಧರೆಗೆ ಉರುಳಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಅಲ್ಲದೇ ಆಯಕಟ್ಟಿನ ಸ್ಥಳಗಳಲ್ಲಿ ಒಂದಾಗಿರುವ ಕೇಶ್ವಾಪೂರದಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಮಳಿಗೆಗಳಿಗೆ ನುಗ್ಗಿದ ನೀರು: ಜೊತೆಗೆ ಇಂದು ಸುರಿದ ಭಾರಿ ಮಳೆಗೆ ಕಾಟನ್ ಮಾರ್ಕೆಟ್ ಕರ್ನಾಟಕ ಬ್ಯಾಂಕ್ ಹತ್ತಿರ ಚರಂಡಿ ನೀರು ಹಲವಾರು ಮಳಿಗೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡುವ ದೃಶ್ಯ ಸಾಮಾನ್ಯವಾಗಿತ್ತು. ನವನಗರದ ಭಾಗದಲ್ಲಿ ಮಳೆಯಿಂದ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಈ ಅಕಾಲಿಕ ಮಳೆಯಿಂದ ಜನಜೀವನ ಹಾಗೂ ಸಂಚಾರದಲ್ಲಿ ಭಾರಿ ಸಮಸ್ಯೆ ಉಂಟಾಗಿದೆ. ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಒಂದೆಡೆಯಾದರೆ, ಗುಡುಗು ಸಹಿತ ಮಳೆಯಿಂದ ಸಂಚಾರಕ್ಕೆ ತೊಂದರೆಯಾಗಿದೆ.
ಇದನ್ನೂ ಓದಿ:ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ