ಹಾವೇರಿಯಲ್ಲಿ ತೆಂಗಿನ ಮರಕ್ಕೆ ಬಡಿದ ಸಿಡಿಲು- ವಿಡಿಯೋ
ಹಾವೇರಿ: ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮುಂಗಾರು ಪೂರ್ವ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿತು. ಹಾವೇರಿ ತಾಲೂಕಿನ ಕರ್ಜಗಿ, ಕಲಕೋಟಿ, ಯತ್ತಿನಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ ಬಿದ್ದಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಿಂದಾಗಿ ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿದು ಪಾದಚಾರಿಗಳು ಓಡಾಟಕ್ಕೆ ತೊಂದರೆ ಉಂಟಾಯಿತು. ರಸ್ತೆ ಪಕ್ಕದಲ್ಲಿರುವ ಕೆಲ ಅಂಗಡಿಗಳಿಗೆ ನೀರು ನುಗ್ಗಿವೆ. ಕೆಲವೆಡೆ ಮಳೆಯಿಂದ ಚರಂಡಿ ನೀರು ಮನೆಗಳಗೆ ನುಗ್ಗಿವೆ. ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಕೆಲವು ಕಡೆ ವಿದ್ಯುತ್ ಸಂಪರ್ಕ ಕೂಡ ಸ್ಥಗಿತಗೊಳಿಸಲಾಗಿತ್ತು. ಮಳೆರಾಯನ ಆಗಮನ ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ.
ತೆಂಗಿನ ಮರಕ್ಕೆ ಬಡಿದ ಸಿಡಿಲು: ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿಯಿತು. ಸಿಡಿಲ ಅಬ್ಬರಕ್ಕೆ ದೇವಿಹೊಸೂರು ಗ್ರಾಮದ ಬನಶಂಕರಿ ದೇವಸ್ಥಾನದ ಆವರಣದಲ್ಲಿನ ತೆಂಗಿನಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮರ ಸುಟ್ಟು ಹೋಗಿದ್ದು ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ. ಘಟನೆಯ ವಿಡಿಯೋವನ್ನು ಗ್ರಾಮಸ್ಥರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ:ಜೂನ್ 1ರವರೆಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ