ಕರ್ನಾಟಕ

karnataka

ETV Bharat / videos

ಬೀದರ್: ರಾಜಹಂಸ ಬಸ್ ಪಲ್ಟಿ, 12 ಮಂದಿಗೆ ಗಾಯ - etv bharat karnataka

By

Published : Jan 23, 2023, 10:12 PM IST

Updated : Feb 3, 2023, 8:39 PM IST

ಬೀದರ್: ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಹಂಸ ಬಸ್ ಪಲ್ಟಿಯಾಗಿ 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಕಲಬುರಗಿಯಿಂದ ಹೈದರಾಬಾದ್​ಗೆ ಹೊರಟಿದ್ದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆಎ-32, ಎಫ್-2348 ರಾಜಹಂಸ ಬಸ್ಸಿನಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಬಸ್ ಚಾಲಕ ಹಾಗೂ ಒಬ್ಬ ಪ್ರಯಾಣಿಕನಿಗೆ ಗಂಭಿರ ಗಾಯವಾದರೆ, 10 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳು ಆಗಿವೆ. ತಕ್ಷಣವೇ ಸ್ಥಳಕ್ಕೆ ಪಿಎಸ್ಐ ಸುದರ್ಶನರೆಡ್ಡಿ, ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಾಯದೊಂದಿಗೆ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಈ ಕುರಿತು ಮನ್ನಾಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Feb 3, 2023, 8:39 PM IST

ABOUT THE AUTHOR

...view details