ಕಾರಿನ ಟಯರ್ ಬ್ಲಾಸ್ಟ್ ನಡುವೆಯೂ ಬೇಕಾಬಿಟ್ಟಿ ಚಾಲನೆ : ವಿಡಿಯೋ
ಬೆಂಗಳೂರು:ಟಯರ್ ಬ್ಲಾಸ್ಟ್ ಆದರೂ ಸಹ ಚಾಲಕನೊಬ್ಬ ಕಿ.ಮೀಟರ್ಗಟ್ಟಲೇ ರಿಮ್ನಲ್ಲೇ ಅತಿವೇಗವಾಗಿ ಕಾರು ಚಲಾಯಿಸಿದ ಘಟನೆ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದಿರಾನಗರದಿಂದ ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ಯುವಕನೊಬ್ಬ ಮನಸೋಇಚ್ಛೆ ತನ್ನ ಟೊಯೋಟಾ ಗ್ಲಾಂಜಾ ಕಾರು ಚಲಾಯಿಸಿದ್ದು, ಕಾರಿನ ವೇಗಕ್ಕೆ ಟಯರ್ ಬ್ಲಾಸ್ಟ್ ಆಗಿದೆ. ಆದರೂ ಸಹ ರಿಮ್ನಲ್ಲೆ ಕಾರು ಚಲಾಯಿಸಿದ್ದಾನೆ ಎಂದು ಹೇಳಲಾಗುತ್ತಿದೆ.
ಸುಮಾರು 100-120 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದ್ದ ಕಾರನ್ನ ಕಂಡು ಜನ ಭಯಭೀತರಾಗಿದ್ದಾರೆ. ಕಾರಿನ ವೇಗ ನೋಡಿದ ರಾತ್ರಿ ಪಾಳಿ ಪೊಲೀಸರು ಸುಮಾರು 2-3 ಕಿ.ಮೀ ದೂರದವರೆಗೆ ಆ ಯುವಕನನ್ನು ಹಿಂಬಾಲಿಸಿದ್ದಾರೆ. ಆದ್ರೆ ಆಕ್ಸೆಲ್ ಕಟ್ ಆಗಿದ್ದಕ್ಕೆ ಮುನಿಯಪ್ಪ ಸರ್ಕಲ್ ಬಳಿ ಕಾರು ಕೆಟ್ಟು ನಿಂತಿತ್ತು. ಬಳಿಕ ಪೊಲೀಸರು ಕಾರಿನ ಬಳಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದರು. ಪೊಲೀಸರು ಈ ಘಟನೆ ಕುರಿತು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸಾವು, ಮತ್ತೋರ್ವ ಗಂಭೀರ: ಸಿಸಿಟಿವಿ ದೃಶ್ಯ