ಪ್ರಿಯಕರನೊಂದಿಗೆ ಓಡಿಹೋಗಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ: ವಿಡಿಯೋ ವೈರಲ್ - ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಘಟನೆ
ರತ್ಲಾಮ್ (ಮಧ್ಯಪ್ರದೇಶ): ಮಹಿಳೆಯನ್ನು ಗಂಡನ ಮನೆಯವರು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ. ಈ ಮಹಿಳೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ನಂತರ ಆತನನ್ನು ತೊರೆದು ಗಂಡನ ಖಾಲಿ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದಳು. ಇದೇ ವಿಚಾರವಾಗಿ ಪತಿ ತನುಲಾಲ್ ಸೇರಿದಂತೆ ಕುಟುಂಬ ಸದಸ್ಯರು ಮಹಿಳೆಯನ್ನು ಮರಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಇದರಿಂದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
Last Updated : Feb 3, 2023, 8:36 PM IST