ಧರ್ಮದ ಆಧಾರದ ಮೇಲೆ ರಚನೆಯಾಗಿರುವ ಮೀಸಲಾತಿ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ: ಯೋಗಿ ಆದಿತ್ಯನಾಥ್ - ಮೀಸಲಾತಿ ರಚನೆ ಬಗ್ಗೆ ಹೇಳಿಕೆಗಳು
ಮಂಡ್ಯ:ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಂಡ್ಯ ಜಿಲ್ಲೆಯಲ್ಲಿ ಮತಬೇಟೆ ಆರಂಭಿಸಿದ್ದಾರೆ. ನಗರದ ಮಹಾವೀರ ವೃತ್ತದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಮೀಸಲಾತಿ ವಿಚಾರದಲ್ಲಿ ಪಕ್ಷದ ನಿಲುವನ್ನು ಭಾಷಣದ ಆರಂಭದಲ್ಲೇ ಸ್ಪಷ್ಟಪಡಿಸಿದ ಸಿಎಂ ಯೋಗಿ, ಧರ್ಮದ ಆಧಾರದ ಮೇಲೆ ರಚನೆಯಾಗಿರುವ ಮೀಸಲಾತಿ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದ್ದ ಪಂಚವಾರ್ಷಿಕ ಯೋಜನೆ ಬಗ್ಗೆಯೂ ಅವರು ವ್ಯಂಗ್ಯವಾಡಿದರು. ಭಾರತದ ಭವಿಷ್ಯಕ್ಕಾಗಿ ಬಿಜೆಪಿಯೇ ಭರವಸೆ ಎಂದು ಹೇಳಿದ ಯೋಗಿ, ಬಿಜೆಪಿ ಪಕ್ಷಕ್ಕೆ ಬಲ ತುಂಬುವಂತೆ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿಕೊಂಡರು. ಇದಕ್ಕೂ ಮುನ್ನ ಅವರು ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಪರ ನಗರದ ವಿವಿಧ ಬೀದಿಗಳಘಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತದಾರರ ಗಮನ ಸೆಳೆದರು.
ಇದನ್ನೂ ಓದಿ:ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಎಂಟ್ರಿ: ಆರು ದಿನ 23 ಕಡೆ ಮೋದಿ ಪ್ರಚಾರ