ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಜಪ್ತಿಯಾದ ವಾಹನಗಳು ಅಗ್ನಿಗಾಹುತಿ - summer heat
ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಜಪ್ತಿ ಮಾಡಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಠಾಣೆ ಮುಂದೆ ನಿಲ್ಲಿಸಲಾಗಿದ್ದ ಸುಮಾರು 40ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿವೆ. ಭಾನುವಾರ ಮಧ್ಯಾಹ್ನ 1.30 ಸುಮಾರಿಗೆ ಘಟನೆ ಸಂಭವಿಸಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಸೀಜ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳನ್ನು ಠಾಣೆ ಮುಂಭಾಗದ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗಿ ನೋಡು ನೋಡುತ್ತಿದ್ದಂತೆ ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಬಿಸಿಲಿನ ಝಳಕ್ಕೆ ಬೆಂಕಿ ಹತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಅಗ್ನಿಶಾಮಕದಳ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದೆ.
ಅವಧಿಗೂ ಮೊದಲೇ ಬೇಸಿಗೆ ಆರಂಭ:ಈ ಬಾರಿ ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಬಂದಿದ್ದು, ಮಾರ್ಚ್ 1ರ ಬದಲಿಗೆ ಫೆಬ್ರವರಿ 24 ರಿಂದಲೇ ಬೇಸಿಗೆ ಆರಂಭವಾಗಿದೆ. ಇದರಿಂದ ತಾಪಮಾನ ದಿಢೀರ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.
ಇದನ್ನೂ ಓದಿ :ಪ್ರತ್ಯೇಕ ಘಟನೆ: ಗೋದಾಮಿಗೆ ಬೆಂಕಿ ಬಿದ್ದು ಫರ್ನೀಚರ್ ಬೆಂಕಿಗಾಹುತಿ.. ವಾಹನಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿ