ಕರ್ನಾಟಕ

karnataka

ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 9 ಕಾರುಗಳ ಜಖಂ

ETV Bharat / videos

ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ: 9 ಕಾರುಗಳ ಜಖಂ - ಸರಣಿ ಅಪಘಾತ

By ETV Bharat Karnataka Team

Published : Dec 18, 2023, 2:46 PM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 9 ಕಾರುಗಳು ಜಖಂಗೊಂಡಿವೆ. ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 7 ಸಾದಹಳ್ಳಿಗೇಟ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ 9 ಕಾರುಗಳು ಹಾನಿಯಾಗಿವೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ಏರ್​ಪೋರ್ಟ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಚಿಕ್ಕಜಾಲ ಪೊಲೀಸರು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಪ್ರಕರಣ:ಕರ್ತವ್ಯದಲ್ಲಿದ್ದ ಚಾಲಕ ಅಸ್ವಸ್ಥ‌ಗೊಂಡ ಪರಿಣಾಮ ಬಿಎಂಟಿಸಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ತಡರಾತ್ರಿ ಪ್ಯಾಲೇಸ್ ಗುಟ್ಟಹಳ್ಳಿ ಸಮೀಪದ ಮೇಲ್ಸೇತುವೆ ಬಳಿ ಅಪಘಾತ ಸಂಭವಿಸಿತ್ತು. ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ ಪಲ್ಟಿಯಾಗಿತ್ತು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಚ್‍ಎಸ್‍ಆರ್ ಲೇಔಟ್ ಮಾರ್ಗವಾಗಿ ತೆರಳುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಪ್ಯಾಲೇಸ್ ಗುಟ್ಟಹಳ್ಳಿ ಫ್ಲೈ ಓವರ್ ಸಮೀಪ ಬಂದಾಗ ಚಾಲಕ ತಲೆ ಸುತ್ತಿನಿಂದ ಅಸ್ವಸ್ಥನಾಗಿದ್ದಾನೆ. ಈ ವೇಳೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿತ್ತು. ಈ ಬಸ್​ನಲ್ಲಿ 13 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದವು.

ಇದನ್ನೂ ಓದಿ:ಚಿಕ್ಕೋಡಿ: ಖಾಸಗಿ ಶಾಲಾ‌ ಬಸ್ ಪಲ್ಟಿ, ಅಪಾಯದಿಂದ ಪಾರಾದ ವಿದ್ಯಾರ್ಥಿಗಳು

ABOUT THE AUTHOR

...view details