ಪಂಜಾಬ್ನಲ್ಲಿ ಭೀಕರ ಪ್ರವಾಹ.. ಹಲವು ಪ್ರದೇಶಗಳು ಜಲಾವೃತ: ವಿಡಿಯೋ - ಪಂಜಾಬ್
ಪಂಜಾಬ್:ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದೆ. ರಾಜಧಾನಿ ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಉತ್ತರದ ಹಲವೆಡೆ ನಿರಂತರ ಮಳೆ ಸುರಿಯುತ್ತಿದೆ. ಪಂಜಾಬ್ ಭೀಕರ ಪ್ರವಾಹಕ್ಕೆ ಸಿಲುಕಿದೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಸೇನೆಯ ನೆರವು ಕೇಳಿದ ಜಿಲ್ಲಾಡಳಿತ: ನಿರಂತರ ಮಳೆಯಿಂದ ಸತತ ಮೂರನೇ ದಿನವಾದ ಸೋಮವಾರವು ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಹೆಚ್ಚು ಹಾನಿಯಾಗಿದೆ. ಅಧಿಕಾರಿಗಳು ಹೆಚ್ಚು ಹಾನಿಗೊಳಗಾದ ಸ್ಥಳಗಳಲ್ಲಿನ ಜನರನ್ನು ರಕ್ಷಿಸಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಪಂಜಾಬ್ ಮತ್ತು ಹರಿಯಾಣದ ಹಲವೆಡೆ ಬೆಳಗ್ಗೆಯಿಂದ ಮಳೆಯಾಗುತ್ತಿದೆ. ರಾಜಪುರ ಪಟ್ಟಣದ ಸಟ್ಲೆಜ್ ಯಮುನಾ ಲಿಂಕ್ (SYL) ಕಾಲುವೆಯಿಂದ ನೀರು ಉಕ್ಕಿ ಹರಿಯುತ್ತಿದೆ. ಇದರಿಂದ ಪಟಿಯಾಲ ಜಿಲ್ಲಾಡಳಿತದಿಂದ ಸೇನೆಯ ಸಹಾಯ ಕೋರಿದೆ.
ನಿಂರಂತರ ಮಳೆಯಿಂದಾಗಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ದಿನದ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಗೃಹ, ವಿಪತ್ತು ನಿರ್ವಹಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ತುರ್ತು ಸಭೆಯನ್ನು ಕರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮಹಾಪ್ರವಾಹಕ್ಕೆ 100 ವರ್ಷ ಹಳೇಯ ಸೇತುವೆಗೆ ಹಾನಿ, ಹತ್ತಾರು ವಾಹನಗಳು ನೀರುಪಾಲು- ವಿಡಿಯೋ