ತಮಿಳುನಾಡಿನಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ - ಭಾರಿ ಮಳೆಯಿಂದಾಗಿ ತಮಿಳುನಾಡು ಜಲಾವೃತ
ತಮಿಳುನಾಡು: ಭಾರಿ ಮಳೆಯಿಂದಾಗಿ ತಮಿಳುನಾಡು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಜೋರು ಮಳೆಯಾಗುತ್ತಿದೆ. ಈಗಾಗಲೇ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಮೈಲಾಡುತುರೈ ಜಿಲ್ಲೆಯ ಸಿರ್ಕಾಲಿ ಪುರಸಭೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ಜಮೀನು, ಮನೆಗಳಿಗೆ ನೀರು ನುಗ್ಗಿದೆ. ಈ ಸಂದರ್ಭದಲ್ಲಿ ಸ್ಥಳೀಯರೊಬ್ಬರು ಪ್ರವಾಹದಲ್ಲಿ ನಿಲುಕಿದ್ದ ನಾಯಿ ರಕ್ಷಣೆ ಮಾಡಿ ಕರೆದೊಯ್ಯುವ ದೃಶ್ಯ ಕಂಡುಬಂತು. ಕೊಯಮತ್ತೂರಿನ ಅಣೆಕಟ್ಟೆಯಿಂದ ಸಾಕಷ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದೆ.
Last Updated : Feb 3, 2023, 8:32 PM IST