ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ : ಮಠದಲ್ಲಿ ಸಕಲ ಸಿದ್ಧತೆ - ಶಿವಕುಮಾರ ಸ್ವಾಮೀಜಿ
ತುಮಕೂರು:'ನಡೆದಾಡುವ ದೇವರು' ಎಂದು ಹೆಸರು ಗಳಿಸಿದ್ದ ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೋತ್ಸವ ಇಂದು ಸಿದ್ಧಗಂಗಾ ಮಠದಲ್ಲಿ ನೆರವೇರುತ್ತಿದೆ. ಕಾರ್ಯಕ್ರಮದಲ್ಲಿ ಐದು ಲಕ್ಷ ಜನ ಭಾಗಿಯಾಗುವ ಸಾಧ್ಯತೆಯಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ಪೂರವಾಗಿ ಮಠದ ಆವರಣದಲ್ಲಿ ಐದು ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ಕೈಗಾರಿಕಾ ವಸ್ತು ಪ್ರದರ್ಶನ ಆವರಣ, ಸಾದರ ಕೊಪ್ಪಲು ಕೆಂಪಹೊನ್ನಯ್ಯ ಅತಿಥಿಗೃಹ, ಹೊಸ ಪ್ರಸಾದ ನಿಲಯದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.