ಅಪಾರ್ಟ್ಮೆಂಟ್ಗಳಿಗೆ ನುಗ್ಗಿ ಶೂ- ಚಪ್ಪಲಿ ಕಳ್ಳತನ : ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆ - Shoes theft
Published : Jan 10, 2024, 11:18 AM IST
ಬೆಂಗಳೂರು :ಇತ್ತೀಚಿನ ದಿನಗಳಲ್ಲಿ ನಗರದ ಪ್ರದೇಶಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಅಪಾರ್ಟ್ಮೆಂಟ್ಗೆ ನುಗ್ಗಿದ ಖದೀಮರು ಶೂಗಳನ್ನು ಕದ್ದು ಪರಾರಿಯಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೂಗಳನ್ನು ಹೊತ್ತೊಯ್ಯುತ್ತಿರುವ ದೃಶ್ಯ ಅಪಾರ್ಟ್ಮೆಂಟ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಖದೀಮರು ಭದ್ರತಾ ಸಿಬ್ಬಂದಿ ಇಲ್ಲದಿರುವ ಅಪಾರ್ಟ್ಮೆಂಟ್ಗಳನ್ನು ಗುರಿಯಾಗಿಸಿ ರಾತ್ರೋ ರಾತ್ರಿ ಶೂಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದೇ ರೀತಿ ಹಲವು ಅಪಾರ್ಟ್ಮೆಂಟ್ಗಳಲ್ಲಿ ಇಡಲಾಗಿದ್ದ ಶೂ-ಚಪ್ಪಲಿಗಳನ್ನು ಎಗರಿಸಿ ಪರಾರಿಯಾಗಿದ್ದಾರೆ. ಇಬ್ಬರು ಕಳ್ಳರು ಬೆಳಗಿನ ಜಾವ 3.30ರ ಸುಮಾರಿಗೆ ಶೂಗಳನ್ನು ಕದ್ದು ಮೂಟೆ ಕಟ್ಟಿ ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೈಕ್ ಕಳ್ಳತನ, ಕಾರು ಕಳ್ಳತನ, ಮೊಬೈಲ್ ಕಳ್ಳತನ, ಅಂಗಡಿ ಮುಂಗಟ್ಟುಗಳ ಕಳ್ಳತನ ಪ್ರಕರಣಗಳು ಆಗಾಗ್ಗೇ ವರದಿಯಾಗುತ್ತಲೇ ಇರುತ್ತವೆ. ಕಳ್ಳತನ ತಗ್ಗಿಸಲು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ :ಬೈಕ್‌ನಲ್ಲಿಟ್ಟಿದ್ದ ಎರಡೂವರೆ ಲಕ್ಷ ಹಣ ಕಳ್ಳತನ: ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ