ಮನೆ ಕಳ್ಳತನ: ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಕಿರುಚಿತ್ರದ ಮೂಲಕ ಜಾಗೃತಿ - ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು
ಬೆಂಗಳೂರು: ನಗರದಲ್ಲಿ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಖದೀಮರು ಕಳ್ಳತನ ಮಾಡುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಕೃತ್ಯಗಳನ್ನು ತಡೆಯಲು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಮನೆಗಳ್ಳತನವಾಗದಂತೆ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಕ್ರಮಗಳೇನು?, ಕಳ್ಳತನವಾದಾಗ ಮಾಡಬೇಕಾದ ಕೆಲಸ?, ಪೊಲೀಸರಿಗೆ ಹೇಗೆ ದೂರು ನೀಡಬೇಕು? ಎಂಬುದು ಸೇರಿದಂತೆ ಪ್ರತಿಯೊಂದು ಅಂಶಗಳ ಬಗ್ಗೆ ಕಿರುಚಿತ್ರದ ಮೂಲಕ ಮಾಹಿತಿ ನೀಡಲಾಗಿದೆ.
Last Updated : Feb 3, 2023, 8:34 PM IST