ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋ ಬಿಡುಗಡೆ.. ಜನವರಿಯಲ್ಲಿ ಪ್ರಾಣ ಪ್ರತಿಷ್ಠಾಪನೆ, ಪ್ರಧಾನಿ ಮೋದಿಗೆ ಆಹ್ವಾನ - video of the construction work of the Ram Temple
Published : Oct 26, 2023, 7:43 PM IST
ಉತ್ತರಪ್ರದೇಶ (ಅಯೋಧ್ಯೆ) : ಅಯೋಧ್ಯೆ ರಾಮಮಂದಿರದ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ಸಾಕಷ್ಟು ಕೆಲಸಗಳು ಪೂರ್ಣಗೊಂಡಿವೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ಇದೀಗ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರದ 'ಗರ್ಭಗೃಹ' ದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ದಿನಾಂಕವನ್ನು ಅಧಿಕೃತಗೊಳಿಸಿದ್ದಾರೆ. ಜನವರಿ 22, 2024 ರಂದು ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ ಎಂದು ಘೋಷಿಸಿದ್ದಾರೆ.
ಈ ದಿನದಂದೇ ರಾಮನ ವಿಗ್ರಹವನ್ನು ದೇವಾಲಯದ ಒಳಗೆ ಇಡಲಾಗುತ್ತದೆ. ಜನವರಿ 22 ರಂದು ಅಯೋಧ್ಯೆ ದೇವಸ್ಥಾನದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸುವ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಘೋಷಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಇನ್ನು ದೇಶದ ಎಲ್ಲ ದೇವಾಲಯಗಳಲ್ಲಿ ಈ ಸಂಬಂಧ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ಈ ಮೂಲಕ ರಾಮ ನಾಮ ಸ್ಮರಿಸುವಂತೆ ಕೋರಿಕೊಂಡಿದ್ದಾರೆ.
ಇದನ್ನೂ ಓದಿ:ಜನವರಿ 22ಕ್ಕೆ ರಾಮಮಂದಿರ ಉದ್ಘಾಟನೆ ಜತೆಗೆ ಮಸೀದಿ ನಿರ್ಮಾಣಕ್ಕೂ ಅಡಿಪಾಯ ಹಾಕಿ: ಮೋದಿಗೆ ಮುಸ್ಲಿಂ ಮುಖಂಡರ ಮನವಿ