ತುಮಕೂರಿನಲ್ಲಿ ಮತ ಚಲಾಯಿಸಿದ ಶ್ರೀ ಸಿದ್ದಲಿಂಗ ಸ್ವಾಮೀಜಿ- ವಿಡಿಯೋ
ತುಮಕೂರು:16ನೇ ವಿಧಾನಸಭೆ ರಚನೆಗೆ ಇಂದು ಮತದಾನ ನಡೆಯುತ್ತಿದೆ. ರಾಜ್ಯದ 58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತುಮಕೂರಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಹೈವೋಲ್ಟೇಜ್ ಚುನಾವಣಾ ಪ್ರಚಾರದ ನಂತರ ಮತದಾರರು ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ಮತಗಟ್ಟೆಗಳತ್ತ ಆಗಮಿಸುತ್ತಿದ್ದಾರೆ. ಒಟ್ಟು 5,30,85,566 ಮಂದಿ ಮತದಾನಕ್ಕೆ ಅರ್ಹರಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸರ್ವ ಸಿದ್ಧತೆ ಮಾಡಿಕೊಂಡಿದೆ. ರಾಜಕೀಯ ಹಣಾಹಣಿಯಿಂದ ಹೈವೋಲ್ಟೇಜ್ ಚುನಾವಣೆಯಾಗಿ ಇಡೀ ದೇಶದ ಗಮನ ಸೆಳೆದಿದ್ದು, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಸರ್ಕಾರ ರಚನೆಗೆ ಬೇಕಾಗಿರುವ ಬಹುಮತ 113 ಸ್ಥಾನಗಳು.
ಜನಪ್ರತಿನಿಧಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. 2,430 ಪುರುಷರು, 184 ಮಹಿಳೆಯರು, ಒಬ್ಬ ತೃತೀಯ ಲಿಂಗಿ ಸೇರಿ ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ಸುಮಾರು 4 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆಗಾಗಿ ಒಟ್ಟು 84,119 ರಾಜ್ಯ ಪೊಲೀಸ್ ಹಾಗೂ 58,500 ಸಿಎಪಿಎಫ್ ಸಿಬ್ಬಂದಿ ನಿಯೋಜಿಸಲಾಗಿದೆ.
ಇದನ್ನೂ ಓದಿ:ರಾಜ್ಯ ವಿಧಾನಸಭೆ ಚುನಾವಣೆ ಪಕ್ಷಿನೋಟ: ಕಣದಲ್ಲಿರುವ ಅಭ್ಯರ್ಥಿಗಳ ಅಂಕಿ - ಅಂಶ ಇಂತಿದೆ..