ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಕ್ಷಣಗಣನೆ! - etv bharat kannadas
ಬೆಂಗಳೂರು:ಕರುನಾಡಿಗೆ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕೊನೆಗೂ ಮುಗಿದಿದ್ದು, ರಾಜ್ಯದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಆಯ್ಕೆಯಾಗಿದ್ದು, ದೆಹಲಿಯಿಂದ ಬೆಂಗಳೂರಿಗೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಇವರ ಜತೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿರುವ ಡಿಕೆ ಶಿವಕುಮಾರ್ ಸಹ ಬಂದಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿ, ಅಧಿಕೃತವಾಗಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿ, ಆ ನಿರ್ಣಯವನ್ನು ರಾಜ್ಯಪಾಲರಿಗೆ ಕಳುಹಿಸಲಿದ್ದಾರೆ.
ಕಳೆದ ಐದು ದಿನಗಳ ಮುಖ್ಯಮಂತ್ರಿ ಜಿದ್ದಾಜಿದ್ದಿನ ಪೈಪೋಟಿ ಅಂತಿಮಗೊಂಡಿದ್ದು, ಡಿಕೆ ಶಿವಕುಮಾರ್ ಅವರ ಮನವೊಲಿಸಿ ಕೆಲವು ಷರತ್ತುಗಳ ಸೂತ್ರದಡಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಪಕ್ಷದ ಘಟಾನುಘಟಿ ನಾಯಕರ ಆಂತರಿಕ ಬೇಗುದಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ದೆಹಲಿ ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಅಭಿಮಾನಿಗಳು ಹೂ ಮಳೆ ಸುರಿಸಿ ಸ್ವಾಗತಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ಖಚಿತ: ಶಾಮನೂರು ಭವಿಷ್ಯ
ಇದನ್ನೂ ಓದಿ:'ವರುಣಾ ತಂದೆ ಪಾಲಿಗೆ ಲಕ್ಕಿ ಕ್ಷೇತ್ರ': ನಿಜವಾಯ್ತು ತಂದೆ ಬಗ್ಗೆ ಡಾ ಯತೀಂದ್ರ ನುಡಿದಿದ್ದ ಭವಿಷ್ಯ