ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹುಬ್ಬಳ್ಳಿಯಲ್ಲಿ ತುರ್ತು ಲ್ಯಾಂಡಿಂಗ್
ಹುಬ್ಬಳ್ಳಿ:ತಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದ ಸಿದ್ದರಾಮಯ್ಯನವರಿದ್ದ ಹೆಲಿಕಾಪ್ಟರ್ ಹುಬ್ಬಳ್ಳಿಯಲ್ಲಿ ತುರ್ತು ಲ್ಯಾಂಡ್ ಆಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಲ್ಯಾಂಡ್ ಮಾಡಲಾಗಿದೆ. ಯಮಕನಮರಡಿಯಲ್ಲಿ ನಡೆಯುವ ಬಹಿರಂಗ ಸಭೆಗೆ ಭಾಗಿಯಾಗಲು ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದರು.
ಸಿದ್ದರಾಮಯ್ಯ ಅರ್ಧ ಗಂಟೆಗೂ ಹೆಚ್ಚು ಕಾಲ ವಿಮಾನ ನಿಲ್ದಾಣದಲ್ಲಿಯೇ ಕಾಲ ಕಳೆಯುವಂತಾಯಿತು. ಹವಾಮಾನ ವೈಪರಿತ್ಯ ಇರುವುದರಿಂದ ಬೆಳಗಾವಿಗೆ ಹೆಲಿಕಾಪ್ಟರ್ ಮೂಲಕ ತೆರಳುವುದು ಸೂಕ್ತವಲ್ಲ ಎಂದು ಪೈಲೆಟ್ ಸೂಚಿಸಿದ್ದರಿಂದ ಹುಬ್ಬಳ್ಳಿಯಿಂದ ಅವರು ಕಾರಿನ ಮೂಲಕ ಯಮಕನಮರಡಿಯತ್ತ ಪ್ರಯಾಣಿಸಿದರು.
ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ್ ಸವದಿ ಸೀನಿಯರ್ ಲೀಡರ್. ಅವರಿಗೆ ಬಿಜೆಪಿಯಲ್ಲಿ ಅವಮಾನ ಆಗಿದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಅವರು ಪಕ್ಷ ಸೇರ್ಪಡೆಯಾಗಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಅನುಕೂಲವಾಗಲಿದೆ ಎಂದರು. ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಜಗದೀಶ್ ಶೆಟ್ಟರ್ ಕಡೆಯಿಂದ ಯಾರೂ ನಮ್ಮನ್ನು ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ಪಟ್ಟಿ ಇಂದು ಅಥವಾ ನಾಳೆ ಬಿಡುಗಡೆಯಾಗಬಹುದು ಎಂದು ಹೇಳಿದರು.
ಇದನ್ನೂ ಓದಿ:ಶಕ್ತಿಕೇಂದ್ರವಾದ ಸಿದ್ದರಾಮಯ್ಯ ನಿವಾಸ: ಪ್ರತಿಪಕ್ಷ ನಾಯಕನ ಮೇಲುಗೈ, ಮತ್ತೊಂದು ನಿದರ್ಶನ