ನೂಕು ನುಗ್ಗಲಿನಲ್ಲೇ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದ ಸಿದ್ದರಾಮಯ್ಯ - ಈಟಿವಿ ಭಾರತ ಕನ್ನಡ
ಮೈಸೂರು :ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಂಜನಗೂಡಿನ ಕಾರ್ಯ ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ವರುಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಲು ಆಗಮಿಸಿದ ಸಿದ್ದರಾಮಯ್ಯ, ಮೊದಲು ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಇಲ್ಲಿಂದಲೇ ಚುನಾವಣಾ ಪ್ರಚಾರಕ್ಕೆ ಚಾಲನೆಯನ್ನು ನೀಡಿದರು.
ಸಿದ್ದರಾಮಯ್ಯ ಅವರು ಬರುತ್ತಿದ್ದಂತೆ ದೇವಾಲಯದ ಬಳಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಪರ ಘೋಷಣೆ ಕೂಗಿದರು. ಬಳಿಕ ಅಭಿಮಾನಿಗಳಿಗೆ ಕೈ ಬೀಸಿ ನೂಕು ನುಗ್ಗಲಿನಲ್ಲಿಯೇ ದೇವರ ದರ್ಶನಕ್ಕೆ ದೇವಾಲಯ ಪ್ರವೇಶಿಸಿದರು. ಈ ವೇಳೆ ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಕಾಂಗ್ರೆಸ್ ಹಿರಿಯ ಮುಖಂಡ ಕಾರ್ಯ ಸಿದ್ದಯ್ಯಸ್ವಾಮಿ ಮುಂತಾದವರು ಸಾಥ್ ನೀಡಿದರು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ :ಶ್ರೀರಾಘವೇಂದ್ರ ಮಠದಲ್ಲಿ ರಂಜಾನ್ ಆಚರಣೆ.. ಸೌಹಾರ್ದತೆ ಸಂದೇಶ ಸಾರಿದ ಶ್ರೀಗಳು