ಸಿದ್ದು ಸಿಎಂ ಆಗಿ ಅಧಿಕಾರ ಸ್ವೀಕಾರ: ತವರು ಜಿಲ್ಲೆಯಲ್ಲಿ ಸಂಭ್ರಮ.. ವಿಡಿಯೋ - ಪ್ರಮಾಣ ವಚನ
ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ, ತವರು ಜಿಲ್ಲೆ ಮೈಸೂರಿನಲ್ಲಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ, ತವರು ಜಿಲ್ಲೆ ಮೈಸೂರಿನಲ್ಲಿ ಈ ಇಬ್ಬರ ಅಭಿಮಾನಿಗಳು ಸಡಗರ ಸಂಭ್ರಮದಿಂದ, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಈ ಇಬ್ಬರ ಕಟೌಟ್ಗಳ ಮುಂದೆ ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.
ಇದರ ಜೊತೆಗೆ ಪ್ರಮಾಣವಚನದ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು, ನಗರದ ನಂಜುಮಳಿಗೆ ಬಳಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿತ್ತು. ಪ್ರಮಾಣವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಟಾಕಿ ಸಿಡಿಸಿ, ಮೈಸೂರು ಪಾಕ್, ಬಾದಾಮಿ ಹಾಲು ವಿತರಿಸಿ ಸಂಭ್ರಮಾಚರಣೆ ನಡೆಸಿದರು.
ವರುಣಾದಲ್ಲಿ ದೇವರಿಗೆ ಪೂಜೆ: ವರುಣಾ ವಿಧಾನಸಭಾ ವ್ಯಾಪ್ತಿಯ, ಸಿದ್ದರಾಮಯ್ಯನವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ, ಗ್ರಾಮಸ್ಥರು ಟಿವಿಯಲ್ಲಿ ಪ್ರಮಾಣವಚನ ಕಾರ್ಯಕ್ರಮ ವೀಕ್ಷಣೆ ಮಾಡಿ, ಗ್ರಾಮದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ಕಡೆ ಚಿನ್ನದ ಗುಡಿ ಹುಂಡಿ ಗ್ರಾಮದಲ್ಲಿ, ಗ್ರಾಮ ದೇವತಗೆ ವಿಶೇಷ ಪೂಜೆ ಸಲ್ಲಿಸಿ, ಗ್ರಾಮಸ್ಥರು ಸಿದ್ದರಾಮಯ್ಯಗೆ ಜೈಕಾರ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ಇದನ್ನೂ ನೋಡಿ:ನೂತನ ಸಿಎಂ ಸಿದ್ದರಾಮಯ್ಯ ಪದಗ್ರಹಣ: ಹುಬ್ಬಳ್ಳಿಯಲ್ಲಿ ಕೇಕ್ ಕತ್ತರಿಸಿ ಅಭಿಮಾನಿಗಳ ಸಂಭ್ರಮ