ಮಹಾಶಿವರಾತ್ರಿ... ಶಿವಗಂಗೆ ಗಂಗಾಧರೇಶ್ವರಸ್ವಾಮಿಗೆ ವಿಶೇಷ ಪೂಜೆ - ಭಕ್ತರಿಗೆ ಪ್ರಸಾದ ವ್ಯವಸ್ಥೆ
ಮಹಾಶಿವರಾತ್ರಿ ಪ್ರಯುಕ್ತ ನೆಲಮಂಗಲದ ಶಿವಗಂಗೆ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸಿ ಶ್ರೀ ಗಂಗಾಧರೇಶ್ವರಸ್ವಾಮಿ ಮತ್ತು ಸ್ವರ್ಣಾಂಭ ದೇವಿಯ ದರ್ಶನ ಪಡೆದರು. ಶ್ರೀ ಗಂಗಾಧರೇಶ್ವರ ಸ್ವಾಮಿಯ ಲಿಂಗಕ್ಕೆ ಬೆಳಗ್ಗೆ 5 ಗಂಟೆಯಿಂದ ಭಕ್ತರಿಂದ ವಿಶೇಷ ಅಭಿಷೇಕ, ಅಲಂಕಾರ, ಪೂಜಾ ಕಾರ್ಯ ಜರುಗಿದವು. ಭಕ್ತರು ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದು ಪುನೀತರಾದರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಸಾಕಷ್ಟು ಮಂದಿ ಉಪವಾಸದ ಮೂಲಕ ಜಾಗರಣೆ ಮಾಡಿ, ನಂತರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಉಪವಾಸವನ್ನು ಅಂತ್ಯಗೊಳಿಸುವ ಸಂಪ್ರದಾಯವಿರುತ್ತದೆ. ಭಾನುವಾರವು ಸಹ ಗಂಗಾಧರೇಶ್ವರ ಸ್ವಾಮಿ ಮತ್ತು ಸ್ವರ್ಣಾಂಭ ದೇವಾಲಯದಲ್ಲಿ ಪೂಜಾ ವ್ಯವಸ್ಥೆ ಮಾಡಲಾಗಿದೆ.
ಇದನ್ನೂಓದಿ:ಚಿಕ್ಕಬಳ್ಳಾಪುರ ಆದಿಯೋಗಿ ಪ್ರತಿಮೆಯ ದರ್ಶನ ಪಡೆದ ಸೂಪರ್ ಸ್ಟಾರ್ ರಜನಿಕಾಂತ್