ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಷಾರಾಮಿ ಕಾರು: ವಿಡಿಯೋ - ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ
ಗುರುಗ್ರಾಮ್ (ಹರಿಯಾಣ): ಐಷಾರಾಮಿ ಕಾರೊಂದು ಬೆಂಕಿ ಅವಘಡದಲ್ಲಿ ಸುಟ್ಟು ಭಸ್ಮವಾಗಿರುವ ಘಟನೆ ಹರಿಯಾಣದ ಗುರುಗ್ರಾಮ್ನಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು - ನೋವು ಸಂಭವಿಸಿಲ್ಲ.
ಇಲ್ಲಿನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಗುರುವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಐಷಾರಾಮಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ನಂತರದಲ್ಲಿ ರಸ್ತೆ ಪಕ್ಕದ ಮರಕ್ಕೂ ಕಾರು ಗುದ್ದಿದೆ. ಪರಿಣಾಮ ಕಾರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಈ ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಅಷ್ಟರಲ್ಲೇ ಬಹುಪಾಲು ಕಾರು ಸುಟ್ಟು ಹೋಗಿದೆ. ಈ ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಪೋರ್ಷ್ ಸ್ಪೋರ್ಟ್ಸ್ ಕಾರಾಗಿದ್ದು, ಬೆಂಕಿಯಲ್ಲಿ ಹೊತ್ತಿ ಉರಿಯುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ:ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ.. ವೃದ್ಧೆ ಸ್ಥಳದಲ್ಲೇ ಸಾವು; ಮೊಮ್ಮಗನ ಸ್ಥಿತಿ ಗಂಭೀರ