Raichur Accident Video: ಬೈಕ್ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು.. ಅಪಘಾತದ ದೃಶ್ಯ ವೈರಲ್ - Car hits students in raichur
ರಾಯಚೂರು: ಬೈಕ್ ಹಾಗೂ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಘಟನೆ ರಾಯಚೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ಸ್ಟೇಷನ್ ರಸ್ತೆಯಲ್ಲಿನ ಶ್ರೀರಾಘವೇಂದ್ರ ಪೆಟ್ರೋಲ್ ಬಂಕ್ ಬಳಿ ಜುಲೈ 18ರಂದು ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ವಿದ್ಯಾರ್ಥಿನಿಯರಿಗೂ ಕೂಡ ಸಣ್ಣ ಪುಟ್ಟ ಗಾಯಗಳಾಗಿದೆ.
ರಾಯಚೂರಿನ ಕುಲಸುಂಬಿ ಬಡಾವಣೆಯ ನಿವಾಸಿ ಶಿವರಾಜ್ ಪಾಟೀಲ್ ಎಂಬಾತ ಬೈಕ್ ಸವಾರನಾಗಿದ್ದು, ಮಾನವಿ ತಾಲೂಕಿನ ಜ್ಯೋತಿ ಹಾಗೂ ಶಿವಮಂಗಳ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್‌ನಿಂದ ಪೆಟ್ರೋಲ್ ಬಂಕ್ ಬಳಿ ಬೈಕ್ ತಿರುಗಿಸುವಾಗ ರೈಲ್ವೆ ನಿಲ್ದಾಣದಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಮೇಲೆ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತಂತೆ ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೈಕ್ ಸ್ಕಿಡ್ ಆಗಿ ಡಿವೈಡರ್ಗೆ ಬಡಿದು ಭೀಕರ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು