ಬೆಂಗಳೂರಿನಲ್ಲಿ ಸ್ಪಾಂಜ್ ತ್ಯಾಜ್ಯಕ್ಕೆ ಬೆಂಕಿ.. ವಿಡಿಯೋ
Published : Nov 1, 2023, 6:52 PM IST
|Updated : Nov 1, 2023, 7:15 PM IST
ಬೆಂಗಳೂರು :ವೀರಭದ್ರ ನಗರದ ಗ್ಯಾರೇಜ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಫ್ಯಾಕ್ಟರಿಯೊಂದರ ಕಾಂಪೌಂಡ್ನಲ್ಲಿದ್ದ ಸ್ಪಾಂಜ್ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಗಂಗಮ್ಮನ ಗುಡಿ ಬಳಿ ನಡೆದಿದೆ.
ಮಧ್ಯಾಹ್ನ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬಿಸಿಲಿನ ಝಳದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ದೌಡಾಯಿಸಿದ ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ತಿಳಿದು ಬಂದಿದೆ. ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 ಬಸ್‌ಗಳು ಬೆಂಕಿಗೆ ಆಹುತಿ :ಗ್ಯಾರೇಜ್‌ನಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಜರುಗಿದ ಅಗ್ನಿ ಅವಘಡದಲ್ಲಿ 18 ಖಾಸಗಿ ಬಸ್‌ಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ (ಅಕ್ಟೋಬರ್ 30-2023) ನಡೆದಿತ್ತು. ಎಸ್ವಿ ಕೋಚ್ ಎನ್ನುವ ಹೆಸರಿನ ಗ್ಯಾರೇಜ್‌ನಲ್ಲಿ ಹೊಸ ಹಾಗೂ ಹಳೆಯ ಬಸ್ ಇಂಜಿನ್‌ಗಳಿಗೆ ಬಾಡಿ ಅಳವಡಿಸುವ ಕೆಲಸ ಮಾಡಲಾಗುತ್ತಿತ್ತು. ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಗ್ಯಾರೇಜ್‌ನಲ್ಲಿ ನಿಂತಿರುವ ಬಸ್‌ಗಳಿಗೆ ಆವರಿಸಿದೆ ಎಂಬುದು ತಿಳಿದು ಬಂದಿತ್ತು.
ಇದನ್ನೂ ಓದಿ :ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, 18 ಬಸ್‌ಗಳು ಬೆಂಕಿಗೆ ಆಹುತಿ