ಬೌರಿಂಗ್ ಆಸ್ಪತ್ರೆಗೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ದಿಢೀರ್ ಭೇಟಿ
Published : Dec 27, 2023, 7:26 PM IST
ಬೆಂಗಳೂರು:ಇಂದು ನಗರದ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರಾದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ದಿಢೀರ್ ಭೇಟಿ ನೀಡಿದರು. ರೋಗಿಗಳಿಂದ ಕುಂದುಕೊರತೆ ಆಲಿಸಿ ಸೌಕರ್ಯಗಳ ಕುರಿತು ಮಾಹಿತಿ ಸಂಗ್ರಹಿಸಿದರು.
ಔಷಧಗಳನ್ನು ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದವರನ್ನು ಗಮನಿಸಿದ ನ್ಯಾಯಮೂರ್ತಿಗಳು , "ರೋಗಿಗಳನ್ನು ಯಾಕೆ ಔಷಧಿಗಳಿಗಾಗಿ ಅರ್ಧ ಗಂಟೆಗಳ ಕಾಲ ನಿಲ್ಲಿಸುತ್ತೀರಿ?, ಕೌಂಟರ್ಗಳ ಸಂಖ್ಯೆ ಯಾಕೆ ಹೆಚ್ಚಿಸಿಲ್ಲ ಎಂದು ವೈದ್ಯರನ್ನು ಪ್ರಶ್ನಿಸಿದರು. ಆಸ್ಪತ್ರೆಯಲ್ಲಿ ಲಂಚ ಅಥವಾ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತಿದೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದರು.
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರುವ ಸೌಲಭ್ಯಗಳು, ಚಿಕಿತ್ಸೆಯ ಬಗ್ಗೆ ರೋಗಿಗಳಿಂದ ಮಾಹಿತಿ ಕಲೆ ಹಾಕಿದ ನ್ಯಾಯಮೂರ್ತಿಗಳು, ಪ್ರತಿಯೊಂದು ವಾರ್ಡ್‌ಗಳಲ್ಲಿರುವ ಸೌಲಭ್ಯಗಳ ಚಿಕಿತ್ಸಾ ಕೇಂದ್ರಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಕೆಲವು ರೋಗಿಗಳು ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ದೂರು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿ, ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನ್ಯಾಯಮೂರ್ತಿಗಳು ಸೂಚನೆ ನೀಡಿದರು.
ಇದನ್ನೂ ಓದಿ:FRUITS ಆ್ಯಪ್ ಮೂಲಕ ಬರ ಪರಿಹಾರ ವಿತರಣೆ: ಸಚಿವ ಕೃಷ್ಣ ಭೈರೇಗೌಡ