ಕರ್ನಾಟಕ

karnataka

ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ETV Bharat / videos

ಶಾಲಾ ಆವರಣದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ - ವಿಡಿಯೋ

By

Published : Apr 5, 2023, 12:21 PM IST

ನಂದೂರ್‌ಬಾರ್(ಮಹಾರಾಷ್ಟ್ರ) : ಹಳೇ ವೈಷ್ಯಮದ ಹಿನ್ನೆಲೆ ನಂದೂರ್‌ಬಾರ್ ನಗರದ ಜಿಮ್ನಾಷಿಯಂ ಶಾಲಾ ಆವರಣದಲ್ಲಿ ನಿನ್ನೆ ಮಧ್ಯರಾತ್ರಿ 11:30 ರ ಸುಮಾರಿಗೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಗಲಭೆಯಲ್ಲಿ ಗಾಜಿನ ಬಾಟಲಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗಿದೆ. ಯುವಕರ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಈ ವೇಳೆ ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ರಿಂದ 20 ಮಂದಿಯನ್ನು ಬಂಧಿಸಿದ್ದಾರೆ.

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪಿ.ಆರ್.ಪಾಟೀಲ್, ಉನ್ನತ ಪೊಲೀಸ್ ವರಿಷ್ಠಾಧಿಕಾರಿ ನೀಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಉಪವಿಭಾಗದ ಪೊಲೀಸ್ ಅಧಿಕಾರಿ ಸಚಿನ್ ಹಿರೇ, ಸ್ಥಳೀಯ ಅಪರಾಧ ತನಿಖಾ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಖೇಡ್ಕರ್, ನಗರ ಪೊಲೀಸ್ ಇನ್ಸ್‌ಪೆಕ್ಟರ್ ರವೀಂದ್ರ ಕಾಳಮಕರ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. 

ಇನ್ನು ಮಧ್ಯರಾತ್ರಿ ನಡೆದ ಕಲ್ಲು ತೂರಾಟದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸಬೇಡಿ. ಘಟನೆಯಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಪೊಲೀಸ್ ವರಿಷ್ಠಾಧಿಕಾರಿ ಪಿ.ಆರ್. ಪಾಟೀಲ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. 

ನಂದೂರಬಾರ್ ನಗರವನ್ನು ಕೆಲವು ವರ್ಷಗಳ ಹಿಂದೆ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿತ್ತು. ಆದರೆ, ಕಳೆದ ಏಳೆಂಟು ವರ್ಷಗಳಲ್ಲಿ ಇಲ್ಲಿ ಯಾವುದೇ ಕೋಮುಗಲಭೆ ಸೃಷ್ಟಿಸುವ ಘಟನೆ ನಡೆದಿರಲಿಲ್ಲ.  

ಇದನ್ನೂ ಓದಿ :ಪ.ಬಂಗಾಳದ ರಿಶ್ರಾ ರೈಲ್ವೆ ನಿಲ್ದಾಣದಲ್ಲಿ ಕಲ್ಲು ತೂರಾಟ: ರೈಲು ಸೇವೆ ಸ್ಥಗಿತ

ABOUT THE AUTHOR

...view details