ಕರ್ನಾಟಕ

karnataka

ETV Bharat / videos

ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು : ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಈಟಿವಿ ಭಾರತ ಕನ್ನಡ ನ್ಯೂಸ್​​​

By

Published : Nov 24, 2022, 9:49 PM IST

Updated : Feb 3, 2023, 8:33 PM IST

ಬಿಜ್ನೋರ್ (ಉತ್ತರ ಪ್ರದೇಶ): ಬೈಕ್‌ನಲ್ಲಿ ಬಂದ ಮುಸುಕುಧಾರಿಗಳು ವಿದ್ಯಾರ್ಥಿಯೊಬ್ಬನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಜ್ನೋರ್​ನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾ ಕಾಲೇಜಿನ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಸಮಿಕ್ ಎಂಬಾತ ತನ್ನ ಸಹಪಾಠಿಯೊಂದಿಗೆ ಮನೆಗೆ ಹೊರಟಿದ್ದ. ಈ ಸಂದರ್ಭ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸಮಿಕ್​ಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದಾಗಲೇ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸಿಸಿಟಿವಿ ದೃಶ್ಯದಲ್ಲಿ ಗುಂಡು ತಗುಲಿದ ಬಳಿಕವೂ ವಿದ್ಯಾರ್ಥಿ ರಸ್ತೆಯಲ್ಲಿ ಓಡುತ್ತಿರುವುದನ್ನು ಕಾಣಬಹುದು. ಸದ್ಯ ಹಂತಕರ ಪತ್ತೆಗೆ ಪೊಲೀಸರು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ನಗರ ಎಸ್ಪಿ ಪ್ರವೀಣ್ ರಂಜನ್ ಸಿಂಗ್ ತಿಳಿಸಿದ್ದಾರೆ.
Last Updated : Feb 3, 2023, 8:33 PM IST

ABOUT THE AUTHOR

...view details