ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಿದ ಕುಲಪತಿ! - ಈಟಿವಿ ಭಾರತ ಕನ್ನಡ
ಶಾಂತಿನಿಕೇತನ (ಪಶ್ಚಿಮ ಬಂಗಾಳ): ಇಲ್ಲಿನ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಧರಣಿನಿರತ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗೆ ಪ್ರವೇಶ ನೀಡದ ಹಾಗೂ ಹಲವು ವಿದ್ಯಾರ್ಥಿಗಳಿಗೆ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಉಪಕುಲಪತಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸುಮಾರು 21 ದಿನಗಳ ಬಳಿಕ ಉಪಕುಲಪತಿ ಬಿದ್ಯುತ್ ಚಕ್ರವರ್ತಿ ವಿವಿ ಕೇಂದ್ರ ಕಚೇರಿಗೆ ಆಗಮಿಸಿದರು. ಈ ವೇಳೆ ಉಪಕುಲಪತಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಕುಲಪತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳದಲ್ಲಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
Last Updated : Feb 3, 2023, 8:35 PM IST