ಚಲಿಸುತ್ತಿದ್ದ ಕಾರಿಗೆ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಚಾಲಕ - ಗ್ರೇಟರ್ ನೋಯ್ಡಾದ ಆಲ್ಫಾ ಒನ್ ಮೆಟ್ರೋ ನಿಲ್ದಾಣ
ನವದೆಹಲಿ: ಗ್ರೇಟರ್ ನೋಯ್ಡಾದ ಆಲ್ಫಾ ಒನ್ ಮೆಟ್ರೋ ನಿಲ್ದಾಣದ ಬಳಿ ಚಲಿಸುತ್ತಿದ್ದ ಸ್ಯಾಂಟ್ರೋ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಚಾಲಕ ಕಾರಿನಿಂದ ಹೊರಗಿಳಿದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ನಡೆದಿದೆ. ಗ್ರೇಟರ್ ನೋಯ್ಡಾದ ಗಾಮಾ2 ಸೆಕ್ಟರ್‌ನ ನಿವಾಸಿ ಜಿತೇಂದ್ರ ಎನ್ನುವವರು ತಮ್ಮ ಕುಟುಂಬ ಸದಸ್ಯರನ್ನು ಮೆಟ್ರೋ ನಿಲ್ದಾಣಕ್ಕೆ ಬಿಡಲು ಕಾರಿನಲ್ಲಿ ಬಂದಿದ್ದರು. ಕುಟುಂಬ ಸದಸ್ಯರನ್ನು ಬಿಟ್ಟು ತಮ್ಮ ನಿವಾಸಕ್ಕೆ ಹಿಂತಿರುಗಿದ್ದ ವೇಳೆ ಕಾರಿನ ಬಾನೆಟ್ನಿಂದ ಹೊಗೆ ಬರಲು ಆರಂಭವಾಗಿದೆ. ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಇದನ್ನು ಕಂಡ ಜಿತೇಂದ್ರ ಕೂಡಲೇ ಕಾರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಕಾರಿನಿಂದ ಹೊರಗಡೆ ಬಂದಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿದೆ. ಕೂಡಲೇ ಜಿತೇಂದ್ರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೇ ಕಾರು ಭಾಗಶಃ ಸುಟ್ಟು ಹೋಗಿದೆ.
Last Updated : Feb 3, 2023, 8:35 PM IST