ಕಬ್ಬು ಬೆಳೆಗಾರರ ಪ್ರತಿಭಟನೆ: ಧಾರವಾಡ ಡಿಸಿ ಕಚೇರಿಯಲ್ಲಿ ಅಹೋರಾತ್ರಿ ಧರಣಿ - ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿರುವ ಕಬ್ಬು ಬೆಳೆಗಾರರು ದಿನವಿಡೀ ಡಿಸಿ ಕಚೇರಿಯಲ್ಲಿ ಕಳೆದಿದ್ದಾರೆ. ಲಕ್ಷಾಂತರ ಕಬ್ಬು ಬೆಳಗಾರರಿಗೆ ಸರ್ಕಾರ ಅನ್ಯಾಯ ಮಾಡಿದೆ. ಸರ್ಕಾರ ನಾಲ್ಕು ಸಭೆ ನಡೆಸಿದರೂ ದರ ನಿಗದಿ ಮಾಡುವಲ್ಲಿ ವಿಫಲವಾಗಿದೆ ಎಂದು ಕಬ್ಬು ಬೆಳೆಗಾರರು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲೇ ರಾತ್ರಿ ಅಡುಗೆ ತಯಾರಿಸಿ ಬಿಡಾರ ಹೂಡಿದ್ದಾರೆ. ಸ್ಥಳಕ್ಕೆ ಸಕ್ಕರೆ ಸಚಿವರು ಬರುವವರೆಗೂ ಜಾಗ ಬಿಟ್ಟು ಹೋಗೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ ಮುಂದುವರೆದಿದ್ದು, ಸಾವಿರಕ್ಕೂ ಹೆಚ್ಚು ಜನ ರೈತರು ಧರಣಿಯಲ್ಲಿ ಭಾಗಿಯಾಗಿದ್ದಾರೆ.
Last Updated : Feb 3, 2023, 8:31 PM IST