ಕೈ ತಪ್ಪಿದ ಟಿಕೆಟ್: ಮಂಡ್ಯದಲ್ಲಿ ಕೀಲಾರ ರಾಧಾಕೃಷ್ಣ ಬೆಂಬಲಿಗರ ಆಕ್ರೋಶ - Keelara Radhakrishna
ಮಂಡ್ಯ: ಇಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಂಡಿದ್ದು, ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಕೀಲಾರ ರಾಧಾಕೃಷ್ಣ ಅವರಿಗೆ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಕಾರ್ಯಕರ್ತರು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಬದಲಾವಣೆಗೆ ಆಗ್ರಹಿಸಿದರು. ಇದರಿಂದಾಗಿ ಸಕ್ಕರೆನಾಡಿನ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ಇಂದು ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಿ.ರವಿಕುಮಾರ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಹೀಗಾಗಿ ಟಿಕೆಟ್ ಕುರಿತಾಗಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಕೀಲಾರ ರಾಧಾಕೃಷ್ಣ ಹಾಗು ಅವರ ಬೆಂಬಲಿಗರಿಗೆ ನಿರಾಶೆ ಉಂಟಾಗಿದೆ. ಪಕ್ಷದ ವರಿಷ್ಠರ ನಿರ್ಧಾರ ಖಂಡಿಸಿ ಬೆಂಬಲಿಗರು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಿ ಕುರ್ಚಿ ಒಡೆದು ಹಾಕಿ, ಅನ್ಯಾಯ ಅನ್ಯಾಯ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ :ಕೊಪ್ಪಳದಲ್ಲಿ ಚುನಾವಣಾ ಪ್ರಚಾರ ಆರಂಭ: ಮತ ಕೇಳಲು ಬಂದ ಶಾಸಕರಿಗೆ ಗ್ರಾಮಸ್ಥರಿಂದ ತರಾಟೆ