ಮುಸ್ಲಿಂ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ವಿಚಾರಣೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ.. - supreme court
ಧಾರವಾಡ: ಮುಸ್ಲಿಂ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಧಾರವಾಡದಲ್ಲಿ ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂಕೋರ್ಟ್ ಮೇ 9ಕ್ಕೆ ವಿಚಾರಣೆ ಮುಂದೂಡಿದೆ. ವಿಚಾರಣೆ ಮುಗಿಯುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೋರ್ಟ್‌ಗೆ ಮೊದಲೇ ಹೇಳಿದ್ದೇವೆ ಅದು ಮುಂದುವರೆಯುತ್ತದೆ ಎಂದು ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಚಾರಣೆ ಮುಗಿಯುವವರೆಗೂ ಯಾವುದೇ ನಿರ್ಧಾರ ತೆಗದುಕೊಳ್ಳುವುದಿಲ್ಲ ಎಂದು ನಾವೇ ಕೋರ್ಟ್‌ಗೆ ಹೇಳಿದ್ದೇವೆ. ಕೋರ್ಟ್ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ, ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ನವರು ಸುಳ್ಳು ಹೇಳುತ್ತಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಸುಮಾರು 17 ಉಪ ಜಾತಿಗಳಿದ್ದು, ಎಲ್ಲವೂ ಹಿಂದುಳಿದ ವರ್ಗದಲ್ಲೇ ಇವೆ. ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ನಾವು ಈಗ ಮಾಡಿದ ಮೀಸಲಾತಿಯಲ್ಲಿ ಅದೇ ಮೀಸಲಾತಿ ಸಿಗುತ್ತದೆ. ಹೀಗಾಗಿ ಅನ್ಯಾಯ ಆಗಿಲ್ಲ ಎಂದು ತಿಳಿಸಿದರು.