ಕರ್ನಾಟಕ

karnataka

ETV Bharat / videos

ನರೇಂದ್ರ ಮೋದಿಗೆ ಸ್ಮರಣಿಕೆಯಾಗಿ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮೂರ್ತಿ - Swami Vivekanandas birthday

By

Published : Jan 11, 2023, 6:15 PM IST

Updated : Feb 3, 2023, 8:38 PM IST

ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರವರೆಗೆ ನಡೆಯಲಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ ಅವರನ್ನು ಜಿಲ್ಲಾಡಳಿತದಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಗುತ್ತಿದೆ. ಜ. 12 ಸ್ವಾಮಿ ವಿವೇಕಾನಂದರ ಜನ್ಮ ದಿನವೂ ಸಹ ಆಗಿರುವುದರಿಂದ ಅವರ ಸ್ಮರಣಾರ್ಥ ಬೀದರ್ ಜಿಲ್ಲೆಯ ಖ್ಯಾತಿಯನ್ನು ಜಗತ್ಪ್ರಸಿದ್ಧವಾಗಿಸಿದ ಬಿದರಿ ಕಲೆಯಲ್ಲಿ ನಿರ್ಮಿಸಿದ ಸುಂದರ ಮೂರ್ತಿಯನ್ನು ನೀಡಲಾಗುತ್ತಿದೆ.
Last Updated : Feb 3, 2023, 8:38 PM IST

ABOUT THE AUTHOR

...view details