ಕರ್ನಾಟಕ

karnataka

ನಾಳೆ ಸಿಎಂ ಪದಗ್ರಹಣ: ಬೆಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್

ETV Bharat / videos

ನಾಳೆ ಸಿಎಂ ಪದಗ್ರಹಣ: ಬೆಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ - etv bharat karnataka

By

Published : May 19, 2023, 10:44 PM IST

ಬೆಂಗಳೂರು:ನಾಳೆ ನಡೆಯಲಿರುವ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್ ವರಿಷ್ಠರು ಹಾಗೂ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. 2018ರಲ್ಲಿ ಮೈತ್ರಿ ಸರ್ಕಾರ ರಚನೆಯ ವೇಳೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದಿದ್ದ ಸಮಾರಂಭದಂತೆ ಈ ಬಾರಿ ಕಂಠೀರವ ಕ್ರೀಡಾಂಗಣದಲ್ಲಿ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟು ಅನಾವರಣಗೊಳ್ಳಲಿದೆ. ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ನಾಳೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಇಂದು  ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ತಮಿಳು ನಾಡು ಸಿಎಂ ಆಗಮಿಸಿದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಅವರ ಅಭಿಮಾನಿಗಳು ಹೂಗುಚ್ಚ ನೀಡಿ ಸ್ವಾಗತ ಕೋರಿದರು. ಇನ್ನು ಸಿಎಂ ಸ್ಟಾಲಿನ್  ಕೆಐಎಎಲ್ ನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. 

ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ವರಿಷ್ಠ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್​ಗಡ ಸಿಎಂ ಭೂಪೇಶ್ ಬಘೇಲ್, ಹಿಮಾಚಲ‌ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಭಾಗಿಯಾಗಲಿದ್ದಾರೆ. 

ಇದನ್ನೂ ಓದಿ:ನಾಳೆ ಸಿಎಂ ಪದಗ್ರಹಣ; ಕಂಠೀರವ ಸ್ಟೇಡಿಯಂ ಸುತ್ತಮುತ್ತಲಿನ ಈ ಮಾರ್ಗಗಳಲ್ಲಿ ಬದಲಾವಣೆ

ABOUT THE AUTHOR

...view details