ದತ್ತಪೀಠ ಹಾಗೂ ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ.. ಕ್ಷಮೆಯಾಚಿಸಿದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ - Etv Bharat Kannada
ಚಿಕ್ಕಮಗಳೂರು :ದತ್ತಪೀಠ ಹಾಗೂ ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಕ್ಷಮೆಯಾಚಿಸಿದ್ದಾರೆ. ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿರುವ ಟಿ.ಡಿ ರಾಜೇಗೌಡ ಅವರು ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದು, ಹಳ್ಳಿಗಳಲ್ಲಿ ರೂಢಿಯಿರುವ ಶಬ್ಧವನ್ನು ಬಳಸಿದ್ದೇನೆ. ಆ ಪದ ಬಳಕೆ ಯಾರ ಸಂಸ್ಕೃತಿಯೂ ಆಗಬಾರದು. ಆ ಶಬ್ಧ ಬಳಸಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.
ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುತ್ತಿದ್ದಾರೆ, ಹಾಗಾಗಿ ಆಕ್ರೋಶಭರಿತವಾಗಿ ಮಾತನಾಡಿದ್ದೇನೆ. ಮಾಲೆ ಹಾಕಲಿಲ್ಲ ಎಂದು ದಲಿತ ವಿದ್ಯಾರ್ಥಿಗೆ ಹಲ್ಲೆ ಮಾಡಿದರು. ಹಲ್ಲೆ ವಿಷಯವಾಗಿ ಬುದ್ಧಿ ಹೇಳುವ ಕೆಲಸವನ್ನು ಮಾಡಿದ್ದೇನೆ ಎಂದು ಶಾಸಕ ಟಿ.ಡಿ. ರಾಜೇಗೌಡ ವಿಡಿಯೋದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಸಹೋದರ ಮಧು ವಿರುದ್ದ ವಾಗ್ದಾಳಿ ನಡೆಸಿದ ಕುಮಾರ್ ಬಂಗಾರಪ್ಪ