ಕರ್ನಾಟಕ

karnataka

ಕಾರವಾರ: ಲಾರಿ ಹರಿದು ಶಿಕ್ಷಕ ಸ್ಥಳದಲ್ಲೇ ಸಾವು

By ETV Bharat Karnataka Team

Published : Dec 22, 2023, 4:03 PM IST

Updated : Dec 22, 2023, 4:31 PM IST

ETV Bharat / videos

ಕಾರವಾರ: ಲಾರಿ ಹರಿದು ಶಿಕ್ಷಕ ಸ್ಥಳದಲ್ಲೇ ಸಾವು; ಜನರಿಂದ ಆಕ್ರೋಶ

ಕಾರವಾರ: ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರವಾರ ನಗರದ ಹಬ್ಬುವಾಡದಲ್ಲಿ ಇಂದು ನಡೆಯಿತು. ಕಿನ್ನರ ಮೂಲದ ಉಮೇಶ ಗುನಗಿ (50) ಮೃತರು. ಬೈಕ್‌ನಲ್ಲಿ ದೇವಳಮಕ್ಕಿ ಶಾಲೆಗೆ ತೆರಳುತ್ತಿದ್ದಾಗ ಕೈಗಾ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದ ಶಿಕ್ಷಕನ ಮೇಲೆ ಲಾರಿ ಹರಿದು ದುರ್ಘಟನೆ ಸಂಭವಿಸಿದೆ.

ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ, ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು. ಹಬ್ಬುವಾಡ ರಸ್ತೆಯಲ್ಲಿ ಕಳೆದ ಎರಡು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದು, ಈವರೆಗೂ ಪೂರ್ಣಗೊಂಡಿಲ್ಲ. ರಸ್ತೆ ಮಧ್ಯೆ ಡಿವೈಡರ್ ಹಾಕದ ಕಾರಣ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಿದರು.

ಘಟನೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಾರವಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕ್ರೀಮ್ಸ್ ಆಸ್ಪತ್ರೆಗೆ ರವಾನಿಸಿದರು.

ಇದನ್ನೂ ಓದಿ:ಕಡಬದಲ್ಲಿ ವಿಕಲಚೇತನನ ಮೇಲೆ ಹರಿದ ಕಾರು: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

Last Updated : Dec 22, 2023, 4:31 PM IST

ABOUT THE AUTHOR

...view details