ಕರ್ನಾಟಕ

karnataka

ಹಾವೇರಿ : ಪಟಾಕಿ ಗೋದಾಮಿನ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ​ ದಾಳಿ

ETV Bharat / videos

ಹಾವೇರಿ: ಪಟಾಕಿ ಗೋದಾಮಿನ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ​ ದಾಳಿ - ಪಟಾಕಿ ಗೋದಾಮಿಗೆ ದಾಳಿ

By ETV Bharat Karnataka Team

Published : Oct 11, 2023, 9:18 AM IST

ಹಾವೇರಿ :ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ಸಿಎಂ ಸಿದ್ದರಾಮಯ್ಯ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದಲ್ಲಿ ಪಟಾಕಿ ಬಳಕೆ ನಿಷೇಧಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ  ಜಿಲ್ಲಾಡಳಿತ ಹಾವೇರಿ ನಗರದಲ್ಲಿರುವ ಪಟಾಕಿ ಗೋದಾಮುಗಳ  ಮೇಲೆ ದಾಳಿ ನಡೆಸಿದೆ. ಜನನಿಬಿಡ ಪ್ರದೇಶದಲ್ಲಿರುವ ಪಟಾಕಿ ಗೋದಾಮಿಗೆ ತಹಶೀಲ್ದಾರ್ ಶಂಕರ್​ ಜಿ.ಎಸ್​ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಲಿಂಗಪ್ಪ ಗಡಾದ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿ ಪಕ್ಕದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿದ್ದ ಗೋದಾಮನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಶನಿವಾರ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ  ಅಗ್ನಿ ಅವಘಡ ಪ್ರಕರಣದಲ್ಲಿ 14 ಮಂದಿ ಸಾವನ್ನಪ್ಪಿ, 6 ಮಂದಿ ಗಂಭೀರ ಗಾಯಗೊಂಡಿದ್ದರು. ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಗ್ನಿ ಅವಘಡಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿ ವಹಿಸಿದ್ದರು. ಇದೀಗ ಘಟನೆ ಬೆನ್ನಲ್ಲೇ ರಾಜ್ಯಾದ್ಯಂತ ಹಸಿರು ಪಟಾಕಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ :ಮೆರವಣಿಗೆ, ಹಬ್ಬ, ಮದುವೆ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧ, ಹಸಿರು ಪಟಾಕಿಗೆ ಅವಕಾಶ: ಸಿಎಂ

ABOUT THE AUTHOR

...view details