ತೆಲಂಗಾಣ ವಿಧಾನಸಭೆ ಚುನಾವಣೆ: ₹2 ಕೋಟಿ ನಗದು ವಶ-ವಿಡಿಯೋ
By ANI
Published : Nov 24, 2023, 10:08 AM IST
ರಂಗಾರೆಡ್ಡಿ(ತೆಲಂಗಾಣ):ಇಲ್ಲಿನಹಯತ್ ನಗರ ಮತ್ತು ಅಬ್ದುಲ್ಲಾಪುರ್‌ಮೆಟ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬುಧವಾರ ತೆಲಂಗಾಣದ ರಂಗಾರೆಡ್ಡಿಯಲ್ಲಿ ದಾಖಲೆ ಇಲ್ಲದ ಎರಡು ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ರಂಗಾರೆಡ್ಡಿಯ ಪೆದ್ದ ಅಂಬರ್‌ಪೇಟ್‌ನಲ್ಲಿ ಎರಡು ಕಾರುಗಳನ್ನು ತಡೆದು ಪರಿಶೀಲಿಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಈ ಕುರಿತು ತನಿಖೆ ಮುಂದುವರೆದಿದೆ.
ತೆಲಂಗಾಣ ವಿಧಾನಸಭೆ ಚುನಾವಣೆ ನವೆಂಬರ್ 30ರಂದು ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ಜರುಗಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿವೆ. ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ, ಕಾಂಗ್ರೆಸ್ ಮತ್ತು ಬಿಜೆಪಿ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. 2018ರ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂದು ಕರೆಯಲ್ಪಡುವ ಬಿಆರ್ಎಸ್ 119 ಸ್ಥಾನಗಳ ಪೈಕಿ 88 ಸ್ಥಾನಗಳನ್ನು ಗೆದ್ದು, ಒಟ್ಟು ಮತ ಹಂಚಿಕೆಯ ಶೇ 47.4 ಗಳಿಸಿತ್ತು. ಕಾಂಗ್ರೆಸ್ 19 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು.
ಇದನ್ನೂ ಓದಿ:ಯಜಮಾನ ಇಲ್ಲದಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಮನೆಯ 2ನೇ ಹಿರಿಯ ವ್ಯಕ್ತಿಯ ಖಾತೆಗೆ ವರ್ಗಾವಣೆ