'ಮುಂದಿನ ಸಿಎಂ ಸತೀಶ್ ಜಾರಕಿಹೊಳಿ': ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ - ಸಿಎಂ ಸಿದ್ದರಾಮಯ್ಯ
Published : Nov 21, 2023, 1:23 PM IST
ಬೆಳಗಾವಿ:ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ವಿಚಾರ ರಾಜ್ಯದಲ್ಲಿ ಸುದ್ದಿಯಾಗುತ್ತಿರುವ ಬೆನ್ನಲ್ಲೆ ಈ ಬಗ್ಗೆ ಯಾರೂ ಮಾತನಾಡದಂತೆ ಹೈಕಮಾಂಡ್ ಎಚ್ಚರಿಕೆ ನೀಡಿತ್ತು. ಆ ಬಳಿಕ ತಣ್ಣಾಗಿದ್ದ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಶಾಸಕರೊಬ್ಬರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಹೇಳಿಕೆ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ದೀಪಾವಳಿ ಹಾಗೂ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಸವದತ್ತಿ ಶಾಸಕ ವಿಶ್ವಾಸ ವೈದ್ಯ, "ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ. ಮುಂದೊಂದು ದಿನ ಬೆಳಗಾವಿ ಜಿಲ್ಲೆಯಿಂದ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದು ನಿಶ್ಚಿತ" ಎಂದು ಹೇಳಿದ್ದಾರೆ.
ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಹೇಳುವ ಶಾಸಕ ವಿಶ್ವಾಸ ವೈದ್ಯ ಸಿಎಂ ಬದಲಾವಣೆ ಚರ್ಚೆಗೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.
ಇದನ್ನೂ ಓದಿ:ಸಮಯ ಬಂದರೆ ದತ್ತಮಾಲೆ ಹಾಕುವೆನೆಂದ ಹೆಚ್ಡಿಕೆ ಹೇಳಿಕೆಗೆ ಹಿಂದೂಪರ ಸಂಘಟನೆಗಳ ಸಂತಸ