ಕರ್ನಾಟಕ

karnataka

ಒಂದು ಕೈಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಬಸ್​ ಸ್ಟೇರಿಂಗ್ ಹಿಡಿದು ಚಾಲಕ ಸರ್ಕಸ್​: ವಿಡಿಯೋ ವೈರಲ್​

ETV Bharat / videos

ಒಂದು ಕೈಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಬಸ್​ ಸ್ಟೇರಿಂಗ್ ​: ಚಾಲಕನ ವಿಡಿಯೋ ವೈರಲ್​ - etv bharat kannada

By

Published : Jul 24, 2023, 5:42 PM IST

ಮಂಗಳೂರು:ನಗರದ ಸ್ಟೇಟ್ ಬ್ಯಾಂಕ್ ನಿಂದ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್​ ಚಾಲಕ ಒಂದು ಕೈಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು ಬಸ್​ ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಚಾಲಕನ ನಿರ್ಲಕ್ಷ್ಯದ  ಬಗ್ಗೆ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಮೊಬೈಲ್ ಉಪಯೋಗಿಸುತ್ತ ಬಸ್ ಚಲಾಯಿಸಿದ್ದಾನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ ಮೊಬೈಲ್ ಹಿಡಿದುಕೊಂಡು  ಬಸ್​ ಚಲಾಯಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಸ್​ನಲ್ಲಿ ಅಧಿಕ ಪ್ರಯಾಣಿಕರಿದ್ದರು ಎಂಬುದನ್ನು ವಿಡಿಯೋ ಮಾಡಿದ ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಸ್ತೆಗಿಂತ ಹೆಚ್ಚಾಗಿ ಮೊಬೈಲ್​​​​​ ಅನ್ನೇ ಚಾಲಕ ವೀಕ್ಷಿಸುತ್ತಿರುವುದು ಜನರ ಕಳವಳಕ್ಕೆ ಕಾರಣವಾಗಿದೆ.  ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್​ ಕುಲದೀಪ್ ಕುಮಾರ್ ಜೈನ್ ಈ ಬಗ್ಗೆ ಪ್ರತಿಕ್ರಿಯಿಸಿ, ತಪ್ಪಿತಸ್ಥ ಬಸ್ ಚಾಲಕನ ವಿರುದ್ಧ ದಕ್ಷಿಣ ಟ್ರಾಫಿಕ್ ಪೊಲೀಸ್​ ಠಾಣೆ ಕ್ರಮ ಕೈಗೊಂಡಿದೆ. ಅಲ್ಲದೇ ಚಾಲಕನ ಡಿಎಲ್ ಅನ್ನು ರದ್ದುಗೊಳಿಸುವಂತೆ ಆರ್‌ಟಿಒಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. 

ಇದನ್ನೂ ಓದಿ:Watch: ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋದ ಯುವಕ.. ದೃಶ್ಯ ಮೊಬೈಲ್​ನಲ್ಲಿ ಸೆರೆ

ABOUT THE AUTHOR

...view details