ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡ.. 60 ಕ್ಕೂ ಹೆಚ್ಚು ಮನೆಗಳಲ್ಲಿ ಕತ್ತಲು - ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡ
Published : Nov 6, 2023, 3:41 PM IST
ತುಮಕೂರು:ಮನೆಗಳಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ಮೇಲೆ ಹೈ ಟೆನ್ಷನ್ ವೈರ್ ಬಿದ್ದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ 60ಕ್ಕೂ ಹೆಚ್ಚು ಮನೆಗಳಲ್ಲಿ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿವೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮರಿದಾಸನಹಳ್ಳಿಯಲ್ಲಿ ಘಟನೆ ನಡೆದಿದ್ದು, ಜನರು ಭಯಭೀತರಾಗಿದ್ದಾರೆ. ಮನೆಗಳಲ್ಲಿದ್ದ ಎಲೆಕ್ಟ್ರಾನಿಕ್ ಉಪಕರಣಗಳಾದ ಟಿವಿ, ಫ್ರಿಡ್ಜ್, ಫ್ಯಾನ್ ವಾಷಿಂಗ್ ಮಷಿನ್ ಸುಟ್ಟಿವೆ. ಸೋಮವಾರ ಮುಂಜಾನೆ 5 ಗಂಟೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡ ಗ್ರಾಮಸ್ಥರು ಬೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದಾರೆ.
ಇದರಿಂದ ಭಯಭೀತರಾದ ಒಂದು ಮನೆಯ ಮಹಿಳೆ ಘಟನೆ ಕುರಿತು, 'ಅವಘಡ ಸಂದರ್ಭದಲ್ಲಿ ಶಾರ್ಟ್ ಸರ್ಕೂಟ್ನಿಂದ ಮನೆಯ ಬಾಗಿಲು ಮುಟ್ಟಿದ ತಕ್ಷಣ ನಮಗೆ ಶಾಕ್ ಹೊಡೆಯಿತು. ನಾವು ನಮ್ಮ ಮನೆಯಲ್ಲಿ ಮಾತ್ರ ಈ ರೀತಿಯಾಗುತ್ತಿದೆ ಎಂದು ಭಯಗೊಂಡು ಹೊರ ಬಂದರೆ ಚಟ್ ಚಟ್ ಅಂತ ಹೊರಗೆ ಕಂಬಗಳು ಕೂಡ ಹೊತ್ತಿಕೊಂಡು ಉರಿಯುತ್ತಿದ್ದವು' ಎಂದು ಘಟನೆಯ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ:ರಾಮನಗರ: ಕನ್ನಸಂದ್ರ ಗ್ರಾಮದಲ್ಲಿ ನಾಯಿ ಹೊತ್ತೊಯ್ದ ಚಿರತೆ- ವಿಡಿಯೋ