ಕರ್ನಾಟಕ

karnataka

ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ETV Bharat / videos

ಚಿಕ್ಕಮಗಳೂರು; ಭೀಕರ ರಸ್ತೆ ಅಪಘಾತ, ಸಿಸಿಟಿವಿಯಲ್ಲಿ ದೃಶ್ಯ ಸೆರೆ - terrible road accident

By ETV Bharat Karnataka Team

Published : Jan 3, 2024, 6:56 PM IST

ಚಿಕ್ಕಮಗಳೂರು:ಬೆಳ್ಳಂಬೆಳಗ್ಗೆ ವಾಕಿಂಗ್​ ಮುಗಿಸಿಕೊಂಡು ತೆರಳುತ್ತಿದ್ದ ವ್ಯಕ್ತಿಗೆ ಬೈಕ್​ವೊಂದು ಡಿಕ್ಕಿ ಹೊಡೆದಿದೆ. ಪಾದಚಾರಿಗೆ ದ್ವಿಚಕ್ರ ವಾಹನ ಗುದ್ದಿದ ರಭಸಕ್ಕೆ ಚಾಲಕ ಮೇಲೆ ಹಾರಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಬೈಕ್ ಸವಾರ ಹಾಗೂ ವಾಕಿಂಗ್​ ಮುಗಿಸಿಕೊಂಡು ಹೋಗುತ್ತಿದ್ದ ಪಾದಚಾರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನಿಸುವಂತಿದೆ. 

ವಾಕಿಂಗ್​ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್​ವೊಂದು ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಬೈಕ್ ಸವಾರ, ಪಾದಚಾರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ಹೊರ ವಲಯದ ಬಿಳಗುಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗಿನ ಜಾವ ವಾಕಿಂಗ್​ ಮುಗಿಸಿ ರಸ್ತೆ ದಾಟುತ್ತಿದ್ದ ಸಮೀರ್ ಎಂಬಾತ ಅಪಘಾತಕ್ಕೊಳಗಾಗಿರುವ ವ್ಯಕ್ತಿ. ಮೂಡಿಗೆರೆಯಲ್ಲಿ ಮೆಡಿಕಲ್ಸ್​ ನಡೆಸುತ್ತಿದ್ದ ಸಮೀರ್ ಕಾಲು ಮುರಿದಿದೆ. ಮುಖ, ಕೈ, ಕಾಲಿಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್​ ಸವಾರನಿಗೆ ಗಂಭೀರ ಗಾಯ ಆಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕುರಿತು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಬಸ್​ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ: 12 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿ ಗಂಭೀರ

ABOUT THE AUTHOR

...view details